ದಾವಣಗೆರೆ ಜ.01 ಜಿಲ್ಲಾಧಿಕಾರಿಗಳು ಜ.01 ರಂದು ನಗರದ ಬಿ.ಟಿ.ಲೇ ಔಟ್‍ನಲ್ಲಿ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ವಾಲ್ಮೀಕಿ ಭವನದ ಕಾಮಗಾರಿಯನ್ನು ಅನಿರೀಕ್ಷಿತವಾಗಿ ಭೇಟಿ ನೀಡುವ ಮೂಲಕ ವೀಕ್ಷಿಸಿದರು. ನಂತರ ಗುತ್ತಿಗೆದಾರರಿಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚನೆ ನೀಡಿದರು. ಈ ವೇಳೆ ಪಿಆರ್‍ಇಡಿ ಇಂಜಿನಿಯರ್ ಪರಮೇಶ್ವರಪ್ಪ, ಪರಿಶಿಷ್ಟ ಜಾತಿ ನಿಗಮದ ವ್ಯವಸ್ಥಾಪರಾದ ಸುರೇಶ್ ರೆಡ್ಡಿ ಹಾಗೂ ಇತರೆ ಅಧಿಕಾರಿಗಳು ಇದ್ದರು.
