ದಾವಣಗೆರೆ ಜ.13
ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವದ ಪ್ರಯುಕ್ತ ಬಳ್ಳಾರಿ ಜಿಲ್ಲಾಡಳಿತದ ಕೋರಿಕೆಯ ಮೇರೆಗೆ ಜ.15 ರಿಂದ 25 ರವರೆಗೆ ಭದ್ರಾ ಜಲಾಶಯದಿಂದ ತುಂಗಭದ್ರ ನದಿಗೆ 0.500 ಟಿ.ಎಂ.ಸಿ ನೀರನ್ನು ಕುಡಿಯಲು ಹರಿಸಲಾಗುತ್ತಿದ್ದು, ಈ ನದಿ ನೀರನ್ನು ಕುಡಿಯುವ ಹೊರತಾಗಿ ಮತ್ತಾವುದೇ ಉದ್ದೇಶಕ್ಕೆ ಬಳಸದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ ಹರಿಯುವ ತುಂಗಭದ್ರ ನದಿ ಪಾತ್ರದ ಎಡ ಮತ್ತು ಬಲ ದಂಡೆಗಳ ಮೇಲೆ ಪಂಪ್‍ಸೆಟ್ ಹಾಗೂ ಟ್ಯಾಂಕರ್‍ಗಳ ಮೂಲಕ ನದಿ ನೀರು ಎತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೂ ನದಿ ಪಾತ್ರಗಳ ಸುತ್ತಮುತ್ತ 500 ಮೀ ವ್ಯಾಪ್ತಿ ಪ್ರದೇಶದಲ್ಲಿ ಸಾರ್ವಜಕರು ತಿರುಗಾಡುವುದಾಗಲೀ, ದನಕರುಗಳನ್ನು ನದಿಗೆ ಇಳಿಸುವುದಾಗಲೀ ಇತ್ಯಾದಿ ಚಟುವಟಿಕೆಗಳಿಗಾಗಿ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಹಾಗೂ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿರುತ್ತಾರೆ.