ಹಾಸನ.ಜ.13 ಜ.19 ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಪೋಸ್ಟರ್ಗಳನ್ನು ಜಿಲ್ಲಾಧಿಕಾರಿ ಆರ್. ಗಿರೀಶ್ ಬಿಡುಗಡೆ ಮಾಡಿದರು.
ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಮತ್ತು ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ|| ಕಾಂತರಾಜ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ|| ರಾಜ್ ಗೋಪಾಲ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ವಿನೋದ್ ಚಂದ್ರ ಉಪಸ್ಥಿತರಿದ್ದರು.