ಕೇಂದ್ರ ಹಾಗು ರಾಜ್ಯ ಸರಕಾರಗಳ ಸಹಯೋಗದೊಂದಿಗೆ ನಡೆಯಲಿರುವ ಪಲ್ಸ್ ಪೋಲಿಯೋ ಕಾಯ೯ಕ್ರಮ ಪೋಲಿಯೋ ಮುಕ್ತ ಭಾರತಕ್ಕಾಗಿ ನಡೆಯುತ್ತದೆ. ಇದೇ ತಿಂಗಳ ೧೯ ರಂದು ಭಾನುವಾರ 5 ವಷ೯ ವಯೋಮಿತಿ ಒಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆಯನ್ನು ಪೋಷಕರು ತಮ್ಮ ಮಕ್ಕಳಿಗೆ ಹಾಕಿಸಬೇಕು.ಈ ಅಭಿಯಾನ ಯಶಸ್ವಿ ಅನುಷ್ಟಾನಕ್ಕಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಾವಣಗೆರೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ,ಹಾಗು ಹೊನ್ನಾಳಿ ತಾಲೂಕು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪೋಲಿಯೋ ಲಸಿಕಾ ಕಾಯ೯ಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾನ್ಯ ಜಿಲ್ಲಾಧಿಕಾರಿಗಳಾದ ಮಹಂತೇಶ್ ಬಿಳಗಿಯವರು ಹೊನ್ನಾಳಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಲಿಸಿಕಾ ಕಾರ್ಯಕ್ರಮವನ್ನು ಬೆಳಗ್ಗೆ 9ಗಂಟೆಗೆ ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿಗಳ ಮೂಲಗಳಿಂದ ತಿಳಿದುಬಂದಿದೆ