ದಾವಣಗೆರೆ : ಕಾಂಗ್ರೆಸ್ ಪಕ್ಷದ ವತಿಯಿಂದ ಮಹಾನಗರ ಪಾಲಿಕೆಯ ನೂತನ ಕಾಂಗ್ರೆಸ್ ಪಕ್ಷದ ಸದಸ್ಯರುಗಳಿಗೆ ಹಾಗೂ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಚಿಂತನ- ಮಂಥನ ಸಮಾವೇಶ ಹಾಗೂ ಸನ್ಮಾನ ಸಮಾರಂಭವನ್ನು ಜನೆವರಿ 23 ರ ಗುರುವಾರದಂದು ಹಮ್ಮಿಕೊಳ್ಳಲಾಗಿದೆ.
ಅಂದು ಸಂಜೆ 5.00ಗಂಟೆಗೆ ನಗರದ ಎಂಸಿಸಿ ಎ ಬ್ಲಾಕ್‍ನ ಶ್ರೀ ತೋಗಟವೀರ ಕಲ್ಯಾಣಮಂದಿರದಲ್ಲಿ ನಡೆಯುವ ಈ ಸಮಾರಂಭದ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಯೂಬ್ ಪೈಲ್ವಾನ್‍ರವರು ವಹಿಸಲಿದ್ದಾರೆ.
ಈ ಸಮಾರಂಭಕ್ಕೆ ಮಾಜಿ ಸಚಿವರು, ಹಾಲಿ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು, ಮಾಜಿ ಸಚಿವರುಗಳಾದ ಎಸ್.ಎಸ್.ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಅಲ್ಲಂ ವೀರಭದ್ರಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ಕೆ.ಸಿ.ಕೊಂಡಯ್ಯ, ಅಬ್ದುಲ್ ಜಬ್ಬಾರ್, ಯು.ಬಿ.ವೆಂಕಟೇಶ್, ರಘು ಆಚಾರ್, ಮೋಹನ್‍ಕುಮಾರ್ ಕೊಂಡಜ್ಜಿ ಆಗಮಿಸಲಿದ್ದಾರೆ.
ಆದ ಕಾರಣ ಮಹಾನಗರ ಪಾಲಿಕೆಯ ನೂತನ ಕಾಂಗ್ರೆಸ್ ಪಕ್ಷದ ಸದಸ್ಯರು, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳು, ಮುಖಂಡರು ಹಾಗೂ ಕಾರ್ಯಕರ್ತರುಗಳು, ಕಾಂಗ್ರೆಸ್ ಪಕ್ಷದ ಎಲ್ಲಾ ಅಂಗಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮನವಿ ಮಾಡಿದ್ದಾರೆ.