ಮಡಿಕೇರಿ ಫೆ.07 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಫೆಬ್ರವರಿ 10 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಶುಕ್ರವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮಡಿಕೇರಿಗೆ ಆಗಮಿಸಿ ಫಲಪುಷ್ಪ ಪ್ರದರ್ಶನದಲ್ಲಿ ವೀಕ್ಷಿಸುವಂತಾಗಬೇಕು ಎಂದರು.
ಈ ಬಾರಿ ರಾಜ್ಯ ತೋಟಗಾರಿಕಾ ಇಲಾಖೆಯ ಹಣದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಸುಂದರವಾಗಿ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಆಯೋಜನೆಗೊಂಡಿದೆ. ರಾಜ್ಯಾದ್ಯಂತ ಜನರು ಈ ಫಲಪುಷ್ಪ ಪ್ರದರ್ಶನ ವೀಕ್ಷಣೆ ಮಾಡುವಂತಾಗಬೇಕು ಎಂದರು.
ಪ್ರತಿದಿನ ಸಂಜೆ ಸ್ಥಳೀಯರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೊಡವ ಸಾಹಿತ್ಯ ಅಕಾಡಮಿ ಮತ್ತು ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡಮಿ ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು, ಪ್ರತೀ ವರ್ಷ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಿಕೊಂಡು ಬರಲಾಗಿದೆ. ಈ ವರ್ಷ ಫೆಬ್ರವರಿ ತಿಂಗಳಲ್ಲಿ ಏರ್ಪಡಿಸಲಾಗಿದೆ. ಇನ್ನೂ 3 ದಿನಗಳೂ ಸಹ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಫಲಪುಷ್ಪ ಪ್ರದರ್ಶನದ ಭಾಗವಾಗಿ ಇಂದು ಸಂಜೆ ವಿಶೇಷವಾಗಿ ಲೇಸರ್ ಶೋ ಕಾರ್ಯಕ್ರಮವೂ ಸಹ ನಡೆಯಲಿದೆ. ಇದರೊಂದಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳೂ ಸಹ ನಡೆಯಲಿವೆ ಜೊತೆಗೆ ಗಾಂಧೀ ಮೈದಾನದಲ್ಲಿ ವಿವಿಧ ಇಲಾಖೆಗಳಿಂದ ವಿಶೇಷ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನೂ ಸಹ ಆರಂಭಿಸಲಾಗಿದೆ ಎಂದು ತಿಳಿಸಿದರು.
ನಗರಸಭೆ ಮತ್ತು ಗ್ರೀನ್ ಸಿಟಿ ಫೋರಂ ವತಿಯಿಂದ ತ್ಯಾಜ್ಯ ನಿರ್ವಹಣೆ ಬಗ್ಗೆ ಮಾಹಿತಿ ಮತ್ತು ಮರುಬಳಕೆಗೆ ಯೋಗ್ಯವಿರುವ ವಸ್ತುಗಳನ್ನು ಸಹ ಸಂಗ್ರಹಿಸಲಾಗುವುದು ಎಂದರು.
ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜನೆಗೊಂಡಿದೆ. ಪ್ಲಾಸ್ಟಿಕ್ ಮುಕ್ತವಾಗಿ ಫಲಪುಷ್ಪ ಪ್ರದರ್ಶನ ನಡೆಯಲು ವಿವಿಧ ಇಲಾಖೆಗಳಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನೂ ಸಹ ಮಾಡಿಕೊಂಡಿದ್ದೇವೆ. ಪ್ರವಾಸಿಗರು ಪ್ಲಾಸ್ಟಿಕ್ ಬಳಸಬಾರದು ಮತ್ತು ಎಲ್ಲೆಂದರಲ್ಲಿ ಕಸ ಎಸೆಯಬಾರದು ಎಂದು ಅವರು ಮನವಿ ಮಾಡಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರೋಜಮ್ಮ, ಜಿ.ಪಂ.ಸದಸ್ಯರಾದ ಅಪ್ಪಂಡೇರಂಡ ಭವ್ಯ, ಮೂಕೊಂಡ ಪಿ.ಸುಬ್ರಮಣಿ, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಸದಸ್ಯರಾದ ಕೊಡಪಾಲು ಗಣಪತಿ, ಯೂನಿಯನ್ ಬ್ಯಾಂಕ್ ಅಧ್ಯಕ್ಷರಾದ ಮನುಮುತ್ತಪ್ಪ, ಹಾಪ್‍ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ತೋಟಗಾರಿಕೆ ಇಲಾಖೆ ಉಪ ನಿದೇಶಕರಾದ ಚಂದ್ರಶೇಖರ, ಪ್ರಮೋದ್, ದೇವಕಿ, ಡೀನಾ ಇತರರು ಇದ್ದರು.

Leave a Reply

Your email address will not be published. Required fields are marked *