ಮಹರ್ಷಿ ವಾಲ್ಮೀಕಿ ಗುರುಪೀಠವು ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ ಮಹೋತ್ಸವ -2020ರ ಬೃಹತ್ ಜನಜಾಗೃತಿ ಸಮಾವೇಶವನ್ನು ಮುಖ್ಯಮಂತ್ರಿಗಳಾದ ಶ್ರೀ. ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಿದರು.
ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಮುರುಘಾ ಮಠದ ಪೀಠಾಧಿಪತಿ ಡಾ: ಶ್ರೀ ಶಿವಮೂರ್ತಿ ಮುರುಘಾ ಶರಣರು, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಬಿ.ಸಿ.ಪಾಟೀಲ್, ಸಂಸದ ಜಿ.ಎಂ.ಸಿದ್ದೇಶ್ವರ, ವೈ.ದೇವೇಂದ್ರಪ್ಪ, ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ಸತೀಶ್ ಜಾರಕಿಹೊಳಿ ಉಪಸ್ಥಿತರಿದ್ದರು.