ದಾವಣಗೆರೆ ಫೆ.25
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2019-20 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಮತ್ತು ಅರಿವು ಶೈಕ್ಷಣಿಕ ಸಾಲ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಾಲ ಸೌಲಭ್ಯಗಳನ್ನು ಪಡೆಯಲು ತಿತಿತಿ.ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿದ್ದು, ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅರ್ಜಿದಾರರು ಕರ್ನಾಟಕದ ಖಾಯಂ ವಿಳಾಸವುಳ್ಳವರಾಗಿದ್ದು, ಆಧಾರ್ಕಾರ್ಡ್ ಹೊಂದಿರಬೇಕು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಲ್ಲಿ ಸಣ್ಣ ವ್ಯಾಪಾರ, ಸ್ವಯಂ ಉದ್ಯೋಗ ಹಾಗೂ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಸಾಲ ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. 3 ಲಕ್ಷ ಮಿತಿಯೊಳಗಿರಬೇಕು. 18 ವರ್ಷದಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಇಂಜಿನಿಯರಿಂಗ್, ವೈದ್ಯಕೀಯ, ದಂತ-ವೈದ್ಯಕೀಯ ಹಾಗೂ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಸಿಇಟಿ ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿಹೆಚ್ಡಿ ಕೋರ್ಸ್ನಲ್ಲಿ ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. 6 ಲಕ್ಷ ಮಿತಿಯೊಳಗಿರಬೇಕು. 18 ವರ್ಷದಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಪ್ರಾಂಶುಪಾಲರಿಂದ ದೃಢೀಕರಿಸಿದ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಮತ್ತು ನಿಗದಿತ ಶುಲ್ಕ ನಮೂನೆ ಪತ್ರ ಹೊಂದಿರಬೇಕು.
ಈ ಯೋಜನೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮತ್ತು ವಿಶೇಷ ಚೇತನರಿಗೆ ಶೇ.5 ರಷ್ಟು ಮೀಸಲಾತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 12 ಕೊನೆಯ ದಿನವಾಗಿದೆ.
ಅರ್ಜಿಯ ವಿವರಗಳಿಗಾಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿ ಸಹಾಯವಾಣಿ 9448451111, ಇ-ಮೇಲ್ suಠಿಠಿoಡಿಣ.ಞಚಿಛಿಜಛಿ@ಞಚಿಡಿಟಿಚಿಣಚಿಞಚಿ.gov.iಟಿ ಯೋಜನೆಗಳ ಮಾರ್ಗಸೂಚಿಗಳು ಹಾಗೂ ಅರ್ಜಿ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು ತಿತಿತಿ.ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದಾವಣಗೆರೆ, ಕುರುಬರ ಹಾಸ್ಟೆಲ್ ಕಟ್ಟಡ, ಜಯದೇವ ಸರ್ಕಲ್ ಹತ್ತಿರ ದೂರವಾಣಿ ಸಂಖ್ಯೆ 08192-230934 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.