ಮಾರ್ಚ್ 04 ರಂದು ದಾವಣಗೆರೆ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ 14
ವ್ಯಕ್ತಿಗಳಿಗೆ ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ತಪಾಸಣೆ
ಮಾಡಲಾಯಿತು ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ.
ಇದು ಕಣ್ತಪ್ಪಿನಿಂದ ಪ್ರಕಟವಾದ ಮಾಹಿತಿಯಾಗಿದೆ.
ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯ ನಿರ್ದೇಶನದ
ಮೇರೆಗೆ ಜಿಲ್ಲೆಯಿಂದ ವಿದೇಶಗಳಿಗೆ ಪ್ರಯಾಣ ಕೈಗೊಂಡ 14
ವ್ಯಕ್ತಿಗಳನ್ನು 14 ದಿನಗಳ ಕಾಲ ನಿಗಾವಣೆಯಲ್ಲಿ ಇರಿಸಲಾಗಿದ್ದು,
ಯಾರಿಗೂ ಯಾವುದೇ ರೀತಿಯ ಸೋಂಕು ಅಥವಾ ಸೋಂಕಿನ
ಲಕ್ಷಣಗಳು ಕಂಡು ಬಂದಿರುವುದಿಲ್ಲ. ಮುಂಜಾಗ್ರತಾ
ಕ್ರಮವಾಗಿ ಜಿಲ್ಲಾ ಆಸ್ಪತ್ರೆ, ಬಾಪೂಜಿ ಆಸ್ಪತ್ರೆ ಮತ್ತು ಎಸ್.ಎಸ್.ಐ.ಎಂ
ಆಸ್ಪತ್ರೆಗಳಲ್ಲಿ ತಲಾ 5 ಬೆಡ್ ಇರುವ ಪ್ರತ್ಯೇಕ ವಾರ್ಡ್ನ್ನು
ಗುರುತಿಸಲಾಗಿದೆ. ಸಾರ್ವಜನಿಕರು ಯಾವುದೇ ಆತಂಕಕ್ಕೆ
ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು
ಕು.ಕ. ಅಧಿಕಾರಿ ಡಾ.ರಾಘವೇಂದ್ರಸ್ವಾಮಿ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.