ಧಾರವಾಡ ಮಾ.17: ಹಿರಿಯ ಪತ್ರಕರ್ತ, ನಾಡೋಜ ಡಾ. ಪಾಟೀಲ ಪುಟ್ಟಪ್ಪನವರ ಪಾರ್ಥಿವ ಶರೀರಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ, ಪೆÇಲೀಸ್ ಇಲಾಖೆಯು ಗಾಳಿಯಲ್ಲಿ ಮೂರು ಸುತ್ತು ಕುಶಾಲ ತೋಪು ಹಾರಿಸಿ ಅಗಲಿದ ಮಹಾಚೇತನಕ್ಕೆ ಗೌರವ ಸಲ್ಲಿಸಿದವು.
ಮಧ್ಯಾಹ್ನ 1 ಗಂಟೆಗೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಅವರ ಸ್ವಗೃಹ ಪ್ರಪಂಚದಿಂದ ಅವರ ಕರ್ಮಭೂಮಿ, ಕಾರ್ಯಕ್ಷೇತ್ರ, ಕಳೆದ 5 ದಶಕಗಳಿಂದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ನಾಡು ನುಡಿಗೆ ಸೇವೆ ಸಲ್ಲಿಸಿದ ಅವರ ನೆಚ್ಚಿನ ಸಂಘದ ಆವರಣದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸುಮಾರು ಒಂದು ತಾಸು ಇರಿಸಲಾಗಿತ್ತು.
ಸರ್ಕಾರದ ಪರವಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್, ಅವಳಿ ನಗರ ಪೆÇಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ವರ್ತಿಕಾ ಕಟಿಯಾರ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಡಿಸಿಪಿ ಕೃಷ್ಣಕಾಂತ ಸೇರಿದಂತೆ ಹಲವು ಗಣ್ಯರು ರೀತ್ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು. ಪೆÇಲೀಸ್ ಬ್ಯಾಂಡ್‍ನವರು ಶಿಸ್ತು ಬದ್ಧವಾಗಿ ರಾಷ್ಟ್ರಗೀತೆಯೊಂದಿಗೆ ಗಾಳಿಯಲ್ಲಿ ಮೂರು ಸುತ್ತು ಕುಶಾಲ ತೋಪು ಹಾರಿಸಿ ಶತಾಯುಷಿ ಪಾಟೀಲ ಪುಟ್ಟಪ್ಪ ಅವರಿಗೆ ಅರ್ಥಪೂರ್ಣ ನಮನ ಸಲ್ಲಿಸಿದರು.
ಗಣ್ಯರಿಂದ ಅಂತಿಮ ನಮನ: ಹಿರಿಯ ಸಾಹಿತಿಗಳಾದ ಡಾ. ಚೆನ್ನವೀರ ಕಣವಿ, ಡಾ. ಮಾಲತಿ ಪಟ್ಟಣಶೆಟ್ಟಿ, ಡಾ.ಗುರುಲಿಂಗ ಕಾಪಸೆ, ಡಾ. ಸೋಮಶೇಖರ ಇಮ್ರಾಪೂರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ವಿಜ್ಞಾನಿ ಡಾ. ಎಸ್.ಎಮ್. ಶಿವಪ್ರಸಾದ, ಕರ್ನಾಟಕ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳಾದ ಶಿವಣ್ಣ ಬೆಲ್ಲದ, ಪ್ರಕಾಶ ಉಡಿಕೇರಿ, ಬಸವಪ್ರಭು ಹೊಸಕೇರಿ, ವಿಶ್ವೇಶ್ವರಿ ಹಿರೇಮಠ, ಬಸವಲಿಂಗಯ್ಯ ಹಿರೇಮಠ, ಕೃಷ್ಣ ಜೋಶಿ, ನಿಂಗಣ್ಣ ಕುಂಟಿ, ಬೇಂದ್ರೆ ಸ್ಮಾರಕ ರಾಷ್ಟ್ರೀಯ ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ, ಗುಬ್ಬಚ್ಚಿಗೂಡು ಪತ್ರಿಕೆಯ ಶಂಕರ ಹಲಗತ್ತಿ ಮತ್ತಿತರರು ಉಸ್ಥಿತರಿದ್ದರು.
ಮಧ್ಯಾಹ್ನ 2 ಗಂಟೆಗೆ ಧಾರವಾಡದಿಂದ ಅಮರ ಘೋಷಣೆಗಳೊಂದಿಗೆ ಪಾಪು ಅವರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮ ರಾಣೆಬೆನ್ನೂರು ತಾಲೂಕಿನ ಹಲಗೇರಿಗೆ ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು.