ದಾವಣಗೆರೆ ಮಾ.19
ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ದಾವಣಗೆರೆ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಮಯದಲ್ಲಿ ಕಚೇರಿಯಲ್ಲಿ ಹೆಚ್ಚಿನ ಜನಸಂದಣಿ ಇದ್ದು, ಸಬ್ ರಿಜಿಸ್ಟ್ರಾರ್‍ಗಳಾದ ಬಾಲಕೃಷ್ಣ ಮತ್ತು ಸುಬ್ರಹ್ಮಣ್ಯ ಇವರಿಬ್ಬರೂ ಕಚೇರಿಗೆ ಹಾಜರಾಗಿರಲಿಲ್ಲ. ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಇಬ್ಬರೂ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚನೆ ನೀಡಿದ್ದಾರೆ. ಹಾಗೂ ಅಲ್ಲಿನ ಸಿಬ್ಬಂದಿಗಳಿಗೆ ಜನಸಂದಣಿ ನಿಯಂತ್ರಣ ಹಾಗೂ ಸ್ವಚ್ಚತೆ ಕಾಪಾಡುವಂತೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *