ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 22 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್-19, ಕೋರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲು ಸಿ.ಆರ್.ಪಿ.ಸಿ. 1973ರ ಕಲಂ 144(3)ರ ಮೇರೆಗೆ, ಮಾರ್ಚ್ 21 ರಿಂದ ಮಾರ್ಚ್ 31 ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಮೇರೆವಣಿಗೆ, ಸಮಾವೇಶ, ಸಮ್ಮೇಳನ, ಕ್ರೀಡಾ ಕೂಟ ಹಾಗೂ ಇತರೆ ಯಾವುದೇ ಧಾರ್ಮಿಕ ಸಮಾರಂಭಗಳನ್ನು ಪ್ರತಿಬಂಧಿಸಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಅವರು ನಿಷೇದಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನೂರಕ್ಕೂ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಸಮ್ಮೇಳನ, ಸಮಾವೇಶ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಯಾವುದೇ ಧಾರ್ಮಿಕ ಉತ್ಸವ, ಮೆರವಣಿಗೆ, ಮುಂತಾದವುಗಳನ್ನು ನಿಷೇಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಯಾವುದೇ ಕ್ರೀಡಾಕೂಟ, ಬೇಸಿಗೆ ಶಿಬಿರ / ಪ್ರವಾಸ ಸ್ನೇಹ ಸಮ್ಮೇಳನ, ಸಂಗೀತ ಸಮ್ಮೇಳನ, ನಾಟಕೋತ್ಸವ ವಿಚಾರ ಗೋಷ್ಠಿ ಮುಂತಾದವುಗಳನ್ನು ನಿಷೇಧಿಸಲಾಗಿದೆ. ದಿನ ನಿತ್ಯ ಬಳಕೆ ಮಾಡುವಂತಹ ವಸ್ತುಗಳು ಹಾಗೂ ತರಕಾರಿ ಮಾರುಕಟ್ಟೆಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಪರೀಕ್ಷಾ ಕೇಂದ್ರಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಶವ ಸಂಸ್ಕಾರಕ್ಕೆ ಈ ಆದೇಶ ಅನ್ವಯಿಸುವುದಿಲ್ಲ.
ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು, ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರಾದ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.