ದಾವಣಗೆರೆ ಮಾ.28
ಕೋವಿಡ್ -19 ಸಾಂಕ್ರಾಮಿಕ ರೋಗದ ಹರಡುವಿಕೆ ನಿಯಂತ್ರಣ ಹಿನ್ನೆಲೆ ಆರೋಗ್ಯ ಸೌಲಭ್ಯಗಳು ಸೇರಿದಂತೆ ಅಗತ್ಯ ಸೇವೆಗಳು ಮತ್ತು ಸರಬರಾಜನ್ನು ಖಾತ್ರಿಪಡಿಸುವ ಕುರಿತಂತೆ ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 26ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಅನುಸರಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಈ ಕೆಳಗಿನಂತೆ ಆದೇಶ ಹೊರಡಿಸಿದ್ದಾರೆ.
ಕೋವಿಡ್-19 ಸೋಂಕು ಹರಡುವುದನ್ನು ತಡೆಯುವಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಹಾಗೂ ಆರೋಗ್ಯ ಸೌಲಭ್ಯ ಸೇರಿದಂತೆ ಅಗತ್ಯ ಸೇವೆಗಳನ್ನು ಜಿಲ್ಲೆಯಾದ್ಯಂತ ಒದಗಿಸಲು ಅನುಕೂಲವಾಗುವಂತೆ ದಾವಣಗೆರೆ ಉಪವಿಭಾಗಾಧಿಕಾರಿ ದಾವಣಗೆರೆ, ದಾವಣಗೆರೆ, ಹರಿಹರ, ಹೊನ್ನಾಳಿ, ಚನ್ನಗಿರಿ, ನ್ಯಾಮತಿ, ಜಗಳೂರು ತಹಶೀಲ್ದಾರರನ್ನು ಇನ್ಸಿಡೆಂಟ್ ಕಮ್ಯಾಂಡರ್ಸ್‍ಗಳೆಂದು ನೇಮಿಸಲಾಗಿದೆ. ಈ ಇನ್ಸಿಡೆಂಟ್ ಕಮಾಂಡರ್‍ಗಳು ಆರೋಗ್ಯ ಸೌಲಭ್ಯಗಳು ಸೇರಿದಂತೆ ಇತರೆ ಅಗತ್ಯ ವಸ್ತುಗಳು ಜನರಿಗೆ ನಿರಾಂತಕವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *