
ದಾವಣಗೆರೆ ಮಾ.28
ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಮುಂಜಾಗ್ರಾತಾ ಕ್ರಮವಾಗಿ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಪೆಟ್ರೋಲ್ ಬಂಕ್ಗಳನ್ನು ಮುಚ್ಚುವುದು ಅತ್ಯವಶ್ಯಕವಾಗಿದ್ದು ಸಿಆರ್ಪಿಸಿ ಕಾಯ್ದೆ 1973 ರ 133 ರನ್ವಯ ಜಿಲ್ಲೆಯಾದ್ಯಂತ ಪೆಟ್ರೋಲ್ ಬಂಕ್ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.
ಈ ಆದೇಶವು ಸರ್ಕಾರಿ ವಾಹನಗಳಿಗೆ, ವೈದ್ಯರಿಗೆ, ವೈದ್ಯಕೀಯ ಸಿಬ್ಬಂದಿಗಳಿಗೆ, ಎಲ್ಲಾ ತರಹದ ಆಂಬುಲೆನ್ಸ್ಗಳಿಗೆ, ಔಷಧಿ ವ್ಯಾಪಾರಿಗಳಿಗೆ, ಪತ್ರಕರ್ತರಿಗೆ ಕೇವಲ ಅವಶ್ಯಕ ಸೇವಾ ವ್ಯಾಪ್ತಿಗೊಳಪಡುವ ಇಲಾಖೆಗಳು ಹಾಗೂ ಸರ್ಕಾರಿ ನೌಕರರಿಗೆ ಅನ್ವಯಿಸತಕ್ಕದ್ದಲ್ಲ. ಮೇಲಿನವರಿಗೆ ಇಂಧನ ಭರಿಸುವ ಸಮಯದಲ್ಲಿ ಕಡ್ಡಾಯವಾಗಿ ಅವರ ಗುರುತಿನ ಚೀಟಿಯನ್ನು ಪರಿಶೀಲಿಸಿ ಇಂಧನ ವಿತರಿಸಬೇಕೆಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಬೀಳಗಿ ಆದೇಶಿಸಿರುತ್ತಾರೆ.