ದಾವಣಗೆರೆ: ಮಹಾನಗರ ಪಾಲಿಕೆಯ 7ನೇ ವಾರ್ಡ್ ಸದಸ್ಯರಾದ ವಿನಾಯಕ ಪೈಲ್ವಾನ್ ಅವಶ್ಯಕವಿರುವ 2000 ನಾಗರೀಕರಿಗೆ ಜೋಳ್ಕ, ಸಕ್ಕರೆ, ರವೆ, ಬೇಳೆ, ಅಡುಗೆ ಎಣ್ಣೆಯ ಆಹಾರ ಸಾಮಾಗ್ರಿಗಳ ಕಿಟ್ನ್ನು ವಿತರಿಸಲು ಡಾ|| ಶಾಮನೂರ ಶಿವಶಂಕರಪ್ಪನವರು ಚಾಲನೆ ನೀಡಿದರು.
ಇಂದು ಬೆಳಿಗ್ಗೆ ತಮ್ಮ ಗೃಹ ಕಛೇರಿಯಲ್ಲಿ ಸಾಂಕೇತಿಕವಾಗಿ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿ ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿ ಜನಕ್ಕೆ ಸಹಾಯ ಮಾಡಲು ಸ್ಥಿತಿವಂತರು ಮುಂದೆ ಬರಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ.ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಪಾಲಿಕೆ ಸದಸ್ಯ ವಿನಾಯಕ ಪೈಲ್ವಾನ್, ಮುಖಂಡರುಗಳಾದ ಸತೀಶ್, ಕುಮಾರ್, ಸಮೀವುಲ್ಲಾ ಮತ್ತಿತರರಿದ್ದರು.