ದಾವಣಗೆರೆ ಮೇ.08 –
ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ
ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆಸುಧಾಕರ್ ಇವರು
ಮೇ 09 ರಂದು ಜಿಲ್ಲಾ ಪ್ರವಾಸ ಕೈಗೊಳ್ಳವರು.
ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು 10.30 ಕ್ಕೆ
ದಾವಣಗೆರೆ ಪ್ರವಾಸಿ ಮಂದಿರಕ್ಕೆ (ಸಕ್ರ್ಯೂಟ್ ಹೌಸ್) ಆಗಮಿಸುವರು.
11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್-19
ಹಿನ್ನೆಲೆಯಲ್ಲಿ ಜನಪ್ರತಿನಿದಿಗಳೊಂದಿಗೆ ಸಭೆ ನಡೆಸುವರು.
ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ
ಕೋವಿಡ್-19ಗೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳ
ಸಭೆಯಲ್ಲಿ ಭಾಗವಹಿಸುವರು. ಬಳಿಕ 1 ಗಂಟೆಗೆ ಡಿಸಿ
ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ 3 ಗಂಟೆಗೆ ಕೇಂದ್ರಸ್ಥಾನ
ಬೆಂಗಳೂರಿಗೆ ಹೊರಡುವರು ಎಂದು ಪ್ರಕಟಣೆ ತಿಳಿಸಿದೆ.