ದಾವಣಗೆರೆ ಮೇ.15
ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಕಂದನಕೋವಿ
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ
ಕಾಟನಾಯಕನಹೊಸಹಳ್ಳಿ ಗ್ರಾಮದಲ್ಲಿ ಬದು ನಿರ್ಮಾಣ ಕಾಮಗಾರಿಗೆ
ಇಂದು ಚಾಲನೆ ನೀಡಲಾಯಿತು.
ಒಟ್ಟು 70 ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗಿದ್ದು, ಈ ಕಾಮಗಾರಿ
ಉದ್ಘಾಟನಾ ಸಮಾರಂಭದಲ್ಲಿ ಜಿ.ಪಂ ಸದಸ್ಯ ಕೆ.ಎಸ್ ಬಸವರಾಜ್,

ಸಹಾಯಕ ಕೃಷಿ ನಿರ್ದೇಶಕ ರೇವಣಸಿದ್ದನಗೌಡ್ರು, ಗ್ರಾಮ
ಪಂಚಾಯಿತಿ ಅಧ್ಯಕ್ಷೆ ಪಿ.ಎ ನಾಗರತ್ನಮ್ಮ, ಸದಸ್ಯರುಗಳಾದ
ಹನುಮಂತನಾಯ್ಕ, ವಿಜಯ ಕುಮಾರಿ, ಪಂಚಾಯಿತಿ ಅಭಿವೃದ್ಧಿ
ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *