ದಾವಣಗೆರೆ ಮೇ.17
ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ
ತಡೆಯುವ ಸಲುವಾಗಿ, ಸಾರ್ವಜನಿಕರ ಆರೋಗ್ಯದ
ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾ
ಕ್ರಮಗಳನ್ನು ಕೈಗೊಳ್ಳಲು ಸಿಆರ್‍ಪಿಸಿ 1973ಡಿ ಕಲಂ 144
ರನ್ವಯ ಮೇ 17 ರಿಂದ ಮೇ 19 ರ ಮಧ್ಯರಾತ್ರಿಯವರೆಗೆ
ದಾವಣಗೆರೆ ಜಿಲ್ಲೆಯಾದ್ಯಂತ ಕೆಳಕಂಡ ಷರತ್ತಿಗಳಿಗೆ ಒಳಪಡಿಸಿ
ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
ಆದೇಶಿಸಿದ್ದಾರೆ.
ಈ ನಿಷೇಧಾಜ್ಞೆ ಅವಧಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್
19 ರ ಶುಶ್ರೂಷಾ ಉದ್ದೇಶಗಳನ್ನು ಮತ್ತು ಶಾಸನಬದ್ದ
ಹಾಗೂ ನಿಯಂತ್ರಣ ಪ್ರಕಾರ್ಯಗಳನ್ನು ಹೊರತುಪಡಿಸಿ 05
ವ್ಯಕ್ತಿಗಳಿಗಿಂತ ಹೆಚ್ಚಿನ ಎಲ್ಲಾ ಸಮೂಹ ಒಗ್ಗೂಡುವಿಕೆಯನ್ನು
ನಿಷೇಧಿಸಲಾಗಿದೆ.
ಎಲ್ಲಾ ಧರ್ಮಗಳ ಪ್ರಾರ್ಥನಾ ಒಗ್ಗೂಡುವಿಕೆ ಮತ್ತು
ಹಬ್ಬಗಳ ಒಗ್ಗೂಡುವಿಕೆಯನ್ನು ಸಹ ನಿಲ್ಲಿಸತಕ್ಕದ್ದು. ಈ
ಅವಧಿಯಲ್ಲಿ 65 ವರ್ಷಕ್ಕೂ ಹೆಚ್ಚಿನ ವಯಸ್ಸಿನವರು, ಮಾನಸಿಕ
ಹಾಗೂ ಹೆಚ್ಚಿನ ಕಾಯಿಲೆಯಿಂದ ಬಳಲುತ್ತಿರುವವರು,
ಗರ್ಭಿಣಿಯರು, 10 ವರ್ಷದ ಒಳಗಿನ ಮಕ್ಕಳು
ಆರೋಗ್ಯ/ಚಿಕಿತ್ಸೆ ಉದ್ದೇಶಕ್ಕೆ ಹೊರತುಪಡಿಸಿ ಬೇರೆ ಯಾವುದೇ
ಕಾರಣಕ್ಕೂ ಮನೆಯಿಂದ ಹೊರಬರುವಂತಿಲ್ಲ.
ಈ ಅವಧಿಯಲ್ಲಿ ರಾತ್ರಿ 7 ರಿಂದ ಬೆಳಿಗ್ಗೆ 7 ಗಂಟೆವರೆಗೆ ಸಾರ್ವಜನಿಕ
ಸ್ಥಳಗಳಲ್ಲಿ ಸಾರ್ವಜನಿಕರ ಚಲನ-ವಲನವನ್ನು ಸಂಪೂರ್ಣವಾಗಿ
ನಿಷೇಧಿಸಲಾಗಿದೆ (ರಾತ್ರಿ 7 ರಿಂದ ಮುಂಜಾನೆ 7 ರವರೆಎ ಕಫ್ರ್ಯೂ
ಇರುತ್ತದೆ).
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ
ದಂಡ ಸಂಹಿತೆಯ ಕಲಂ 188 ಮತ್ತು 270 ಹಾಘೂ ವಿಪತ್ತು
ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರ ಪ್ರಕಾರ
ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ

Leave a Reply

Your email address will not be published. Required fields are marked *