ದಾವಣಗೆರೆ ಮೇ 20
   2019 ನೇ ಸಾಲಿನ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಅರ್ಜಿ
ಆಹ್ವಾನಿಸಲಾಗಿದ್ದು, ಕೋವಿಡ್  19  ಲಾಕಡೌನ್ ಆದ ಹಿನ್ನೆಲೆಯಲ್ಲಿ ಅರ್ಜಿ
ಸಲ್ಲಿಸುವ ಅವಧಿಯನ್ನು ಮೇ 30 ರವರೆಗೆ ವಿಸ್ತರಿಸಲಾಗಿದೆ.
   ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019 ನೇ ಸಾಲಿನ
ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು
ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು
ಆಹ್ವಾನಿಸಲಾಗಿದ್ದು ಅರ್ಜಿದಾರರು 18 ರಿಂದ 40 ವರ್ಷ

ವಯೋಮಿತಿಯವರಾಗಿರಬೇಕು. ಸ್ವ ವಿವರವುಳ್ಳ
ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ ಪ್ರಮಾಣಪತ್ರದ
ಪ್ರತಿ ಅಥವಾ ಅಧಿಕೃತವಾದ ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ
ಪ್ರಮಾಣ ಪತ್ರದ ಪ್ರತಿ, ಪ್ರಸುತ್ತ ಸಲ್ಲಿಸಲ್ಪಡುತ್ತಿರುವ
ಕೃತಿಯು ಚೊಚ್ಚಲ ಕೃತಿಯಾಗಿದ್ದು ಎಲ್ಲಿಯೂ
ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು.
   ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗ 1/8 ಡಮ್ಮಿ
ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ
ಪಠ್ಯಪುಸ್ತಕ  ಹಾಗೂ ಬೇರಾವುದೇ ಪದವಿಗೆ ಸಿದ್ದಪಡಿಸಿದ
ಪ್ರಬಂಧಗಳನ್ನು ಹೊರತುಪಡಿಸಿ ಕಥೆ, ಕಾದಂಬರಿ, ಕವನ,
ನಾಟಕ , ವಿಮರ್ಶಾ ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ
ಸಿದ್ದ ಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ ಕಥೆ, ಕಾದಂಬರಿ,
ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ, ಮುಂತಾದ ಕನ್ನಡ
ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ
ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ,
ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ,
ಆಚರಣೆ, ಪದ್ದತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ
ರಾಷ್ಟ್ರೀಯ ನಾಯಕರ ಕುರಿತಂತೆ ನೇರವಾಗಿಯೇ ಆಗಲಿ ಅಥವಾ
ಪರೋಕ್ಷವಾಗಿಯೇ ಆಗಲಿ ಮನ ನೋಯಿಸುವಂತಹ
ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ
ಧಕ್ಕೆ ತರುವಂತಹ ವಿಷಯ ಸಂಗತಿಗಳು
ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ
ಅರ್ಜಿಗಳನ್ನು/ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳ ದೂರವಾಣಿ ಸಂಖ್ಯೆ   080-
22484516/22017704 ಸಂಪರ್ಕಿಸಬಹುದು. ಅರ್ಜಿಗಳನ್ನು ಮೇ 30
ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ ,
ಕನ್ನಡ ಭವನ , ಜೆ.ಸಿ ರಸ್ತೆ ಬೆಂಗಳೂರು ಇಲ್ಲಿ ಸಲ್ಲಿಸಬೇಕು
ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್‍ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *