ದಾವಣಗೆರೆ ಮೇ.31

ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೋಲಿಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ತಾಲ್ಲೂಕು ಆರ್ಯೋಗ್ಯ ಅಧಿಕಾರಿಗಳು ಇವರ ಸಹಯೋಗದೊಂದಿಗೆ.

ಇಂದು ಜಿಲ್ಲಾಧಿಕಾರಿಗಳ ಗೃಹ ಕಚೇರಿಯಲ್ಲಿ ಜಿಲ್ಲಾ ನಿಯಂತ್ರಣ ತಂಬಾಕು ಕೋಶದ ವತಿಯಿಂದ ಏರ್ಪಡಿಸಲಾಗಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಅಧಿಕಾರಿಗಳಿಗೆ ಮಾಸ್ಕ್ ವಿತರಿಸುವ ಮೂಲಕ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಜಿಲ್ಲಾಧಿಕಾರಿಗಳಿಗೆ 200 ಮಾಸ್ಕ್‍ವುಳ್ಳ ಕೀಟ್ ನೀಡಿದರು.

  ಕರ್ನಾಟಕ ಸರ್ಕಾರದ ನಡವಳಿಯ ಪ್ರಕಾರ ಸಾರ್ವಜನಿಕ ಸ್ಥಳದಲ್ಲಿ ಜಗಿಯುವ ತಂಬಾಕು ಉತ್ಪನಗಳು ಹಾಗೂ ಪಾನ್ ಮಸಾಲ ಉತ್ಪನಗಳ ಸೇವನೆ ಉಗುಳುವುದನ್ನು ನಿಷೇಧಿಸಲಾಗಿದೆ.ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನ ಜಗಿದು ಉಗಿಯುವುದರಿಂದ ಕೋವಿಡ್-19 ಹಾಗೂ ಇತರೆ ಸಾಂಕ್ರಮಿಕ ರೋಗಗಳು ಸಾರ್ವಜನಿಕರಿಗೆ ಹರಡುವ ಸಂಭವವಿರುತ್ತದೆ .

ರಾಜ್ಯದಲ್ಲಿ ಕೋವಿಡ್19 ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯು ತಿಳಿಸಿರುವಂತೆ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ತಂಬಾಕು ಉತ್ಪನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಉಗುಳುವುದನ್ನು ನಿಷೇಧಿಸಲಾಗಿದೆ.

ಇ ನಿಯಮ ಉಲ್ಲಂಘಿಸಿದಲ್ಲಿ ಐ.ಪಿ.ಸಿ ಸೆಕ್ಷನ್ 188,268,269,270 ಅಡಿಯಲ್ಲಿ ಪ್ರಾಧಿಕೃತ ಅಧಿಕಾರಿಗಳು ಅಗತ್ಯ ಕಾನೂನು ಕ್ರಮ ಕೈಗೊಳುವಂತೆ ಆರ್ಯೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಪದ್ಮ. ವಿ ಸೂಚಿಸಿದ್ದ್ದಾರೆ.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ಸಹ ಮೇ 31 ರಂದು ವಿಶ್ವ ತಂಬಾಕು ರಹಿತ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ವರ್ಷದ ಘೋಷಣೆ ‘’ಯುವ ಪೀಳಿಗೆಯನ್ನು ತಂಬಾಕು ಉದ್ಯಮಗಳ ಕುತಂತ್ರ ಹಾಗೂ ತಂಬಾಕು ಮತ್ತು ನಿಕೋಟಿನ್ ಬಳಕೆಯಿಂದ ರಕ್ಷಣೆ ಮಾಡುವುದು ಎಂಬುದಾಗಿದೆ”

ತಂಬಾಕಿನಲ್ಲಿ ಸರಿ ಸುಮಾರು 4000 ಸಾವಿರ ಅಪಾಯಕಾರಿ ರಾಸಯನಿಕ ಪದಾರ್ಥಗಳಿದ್ದು ಅದರಲ್ಲಿ 69 ಕ್ಯಾನ್ಸರ್‍ಕಾರಕ ಅಂಶಗಳಿವೆ, ಜಿಲ್ಲೆಯಲ್ಲಿ ಕೋವಿಡ-19 ತಡಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ನಮಗೆ ನೀಡಿರುವ ಆದೇಶದನ್ವಯ ಭಾರತೀಯ ದಂಡ ಸಂಹಿತೆ 1860 ರ ಪ್ರಕಾರ.

ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ತಂಬಾಕು ಪದಾರ್ಥಗಳನ್ನು ತಿಂದು ಉಗುಳಿದರೆ 2 ವರ್ಷ ಜೈಲಿಗೆ ಅಟ್ಟಲಾಗುವುದು ಈ ಆದೇಶವನ್ನು ಎಲ್ಲಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿ ಡಾ. ಮುರಳಿಧರ್, ಡಾ. ತಿಪ್ಪೆಸ್ವಾಮಿ, ಜಿಲ್ಲಾ ಸಲಹೆಗಾರರಾದ ಸತೀಶ್ ಕಲಹಾಳ್, ಸಾಮಾಜಿಕ ಕಾರ್ಯಕರ್ತ ಕೆ.ಇ ದೇವರಾಜ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *