ಚಿಕ್ಕಮಗಳೂರು.ಜೂ.೦೧ : ರಾಜ್ಯಾದ್ಯಂತ ಕೊರೋನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ವೈದ್ಯರು/ತಜ್ಞರನ್ನು ಗರಿಷ್ಠ ೦೬ ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.
ಮೇ.೦೫ ರಂದು ಬೆಳಗ್ಗೆ ೧೦.೩೦ ಗಂಟೆಯಿಂದ ಮಧ್ಯಾಹ್ನ ೩.೦೦ ಗಂಟೆ ವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿಸದ್ದು, ನೇಮಕಾತಿಗೆ ಎಂ.ಬಿ.ಬಿ.ಎಸ್/ ತಜ್ಞ ವೈದ್ಯ ಅಭ್ಯರ್ಥಿಗಳು ವಿದ್ಯಾಭ್ಯಾಸದ ದಾಖಲಾತಿಗಳೊಂದಿಗೆ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಹಿಂಭಾಗದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *