ದಾವಣಗೆರೆ ಜೂ. 03
ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳು
ವರದಿಯಾಗಿರುವ ಕಂಟೈನ್‍ಮೆಂಟ್ ಜೋನ್‍ಗಳಲ್ಲಿ ಹಣದ
ಅಗತ್ಯವುಳ್ಳವರ ಸಹಾಯಕ್ಕಾಗಿ ಬುಧವಾರ ಪಿ.ಬಿ. ಮುಖ್ಯ
ರಸ್ತೆಯಲ್ಲಿರುವ ಎಸ್‍ಬಿಐ ಶಾಖೆಯ ವತಿಯಿಂದ ವ್ಯವಸ್ಥೆ
ಮಾಡಲಾಗಿರುವ ಮೊಬೈಲ್ ಎಟಿಎಂ ವಾಹನ ಸಂಚಾರಕ್ಕೆ ಜಿಲ್ಲಾಧಿಕಾರಿ
ಮಾಹಂತೇಶ ಬೀಳಗಿ ಚಾಲನೆ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ
ಮಾಹಾಮಾರಿ ಪರಿಣಾಮದಿಂದಾಗಿ ಸೀಲ್‍ಡೌನ್ ಪ್ರದೇಶಗಳಲ್ಲಿ ದೈನಂದಿನ
ಹಣಕಾಸಿನ ವ್ಯವಹಾರಕ್ಕೆ ತೊಂದರೆ ಆಗಬಾರದು ಎಂದು
ಕಂಟೈನ್‍ಮೆಂಟ್ ಝೋನ್‍ಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ
ಸೇವೆ ಒದಗಿಸಲಾಗಿದೆ. ಇದರ ಸದುಪಯೋಗವನ್ನು
ಅಗತ್ಯವುಳ್ಳವರು ಪಡೆದುಕೊಳ್ಳಬೇಕು. ಮೊಬೈಲ್ ಎಟಿಎಂ
ಬ್ಯಾಂಕ್‍ಗೆ ಬಹಳಷ್ಟು ಬೇಡಿಕೆ ಇಟ್ಟಿದ್ದೆವು. ಇದೀಗ ಸೇವೆ ಒದಗಿದ್ದು,
ಕಂಟೈನ್‍ಮೆಂಟ್ ಝೋನ್‍ಗಳÀಲ್ಲಿನ ಜನರಿಗೆ ಸಹಾಯವಾಗಲಿದೆ.
ಇದರ ಮೂಲಕ ಜಿಲ್ಲೆಯ ಇತಿಹಾಸದಲ್ಲಿ ಈ ಸೇವೆ ಹೆಸರಾಗಲಿ ಎಂದು
ಬ್ಯಾಂಕ್ ಅಧಿಕಾರಿಗಳಿಗೆ ಶುಭ ಹಾರೈಸಿದರು.
ಕೆಟಿಜೆ ನಗರದ ಕಂಟೈನ್‍ಮೆಂಟ್ ಜೋನ್‍ನಲ್ಲಿ ಕಳೆದ 28
ದಿನಗಳಿಂದ ಒಂದೂ ಪ್ರಕರಣ ದಾಖಲಾಗದ ಹಿನ್ನೆಲೆ
ನಿಯಮಾನುಸಾರ ಡಿನೋಟಿಫೈ ಮಾಡಲಾಗಿದೆ. ಪ್ರಕರಣದ
ಸಂಪರ್ಕದ ಕೊಂಡಿಗಳನ್ನು ಬೇರ್ಪಡಿಸುವ ಕೆಲಸ
ಮಾಡಲಾಗುತ್ತಿದ್ದರೂ ಸಹ ಜಿಲ್ಲೆಯಲ್ಲಿ ಅಲ್ಲೊಂದು ಇಲ್ಲೊಂದು
ಪ್ರಕರಣ ಕಂಡುಬರುತ್ತಿದೆ. ಜಿಲ್ಲಾ ಸರ್ವೇಕ್ಷಣಾ ತಂಡವು
ಉತ್ತಮವಾಗಿ ಕೆಲಸ ಮಾಡುತ್ತಿದೆ. ಕೊರೊನಾ ನಿಯಂತ್ರಿಸಲು
ಇನ್ನೂ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದರು.
ಅತೀ ಹೆಚ್ಚು ಕೇಸ್‍ಗಳು ಜಾಲಿನಗರ ಹಾಗೂ ಬಾಷಾ ನಗರಕ್ಕೆ
ಸಂಬಂಧಿಸಿವೆ. ರೋಗಿ ಸಂಖ್ಯೆ-533 ಮತ್ತು 556 ಇವರಿಗೆ ಸಂಬಂಧಪಟ್ಟ
ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರನ್ನು 300
ರಿಂದ 400 ಜನರನ್ನು ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಅವರಿಗೆ
ಸಂಬಂಧಪಟ್ಟ ದ್ವಿತೀಯ ಸಂಪರ್ಕದವರಿಗೆ ಕೊರೊನಾ ಪ್ರಕರಣ
ಕಂಡು ಬರುತ್ತಿದೆ. ಅದು ಬಿಟ್ಟರೆ ಅಲ್ಲೊಂದು ಇಲ್ಲೊಂದು ಕೇಸ್
ಪತ್ತೆಯಾಗುತ್ತಿವೆ ಎಂದರು.
ಇದೀಗ ಜಿಲ್ಲೆಯಲ್ಲಿ ಕೊರೊನಾಗೆ ಸಂಬಂಧಪಟ್ಟಂತೆ ಪರಿಸ್ಥಿತಿ
ಸುಧಾರಿಸಿದೆ. ಆದಷ್ಟು ಪ್ರಕರಣಗಳು ಗುಣಮುಖರಾಗಿ
ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದ್ದು, ಅವರೆಲ್ಲರಿಗೂ
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಉತ್ತಮವಾದ ಆಹಾರ
ಹಾಗೂ ಆಯುಷ್ ಇಲಾಖೆಯ ಉತ್ಪನ್ನಗಳನ್ನು
ನೀಡಲಾಗುತ್ತಿದೆ. ಇಂದು ಸಹ ಸುಮಾರು 13 ಜನರನ್ನು
ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಕೋವಿಡ್
ನೋಡಲ್ ಅಧಿಕಾರಿ ಪ್ರಮೋದ್ ನಾಯಕ್ ಹಾಗೂ ಎಸ್‍ಬಿಐ ಬ್ಯಾಂಕ್
ಮ್ಯಾನೇಜರ್ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.