ದಾವಣಗೆರೆ ಜೂ.04
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ,
ಅರಣ್ಯ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಜೂ. 05
ರಂದು ಬೆಳಿಗ್ಗೆ 9.45 ಕ್ಕೆ ಜಿಲ್ಲಾ ನ್ಯಾಯಾಲಯ ಆವರಣ, ದೇವರಾಜ್
ಅರಸ್ ಬಡಾವಣೆ ದಾವಣಗೆರೆ ಇಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ
ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ
ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ
ಅಧ್ಯಕ್ಷರಾದ ಕೆ.ಬಿ. ಗೀತಾ ಉದ್ಘಾಟಿಸುವರು. ದಾವಣಗೆರೆ ವಿಭಾಗದ
ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶ್ರೀನಿವಾಸ್ ಅಧ್ಯಕ್ಷತೆ
ವಹಿಸುವರು.
ಮುಖ್ಯ ಅಥಿತಿಗಳಾಗಿ ಕೌಟುಂಬಿಕ ನ್ಯಾಯಾಲಯದ
ನ್ಯಾಯಾಧೀಶರಾದ ಜಿನರಾಲ್ಕರ್ ಬಿ.ಎಲ್, ಒಂದನೇ ಹೆಚ್ಚುವರಿ ಜಿಲ್ಲಾ
ಮತ್ತು ಸತ್ರ ನ್ಯಾಯಾಧೀಶರಾದ ಕೆಂಗಬಾಲಯ್ಯ, ಎರಡನೇ
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಾಗಶ್ರೀ,
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ
ಚಂದ್ರಕಲಾ. ಈ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ
ಕಾರ್ಯದರ್ಶಿ ಸಾಬಪ್ಪ , ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎನ್.ಟಿ
ಮಂಜುನಾಥ್, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ
ಅರುಣಕುಮಾರ್ ಎಲ್. ಹೆಚ್. ಭಾಗವಹಿಸುವರು.
ದಾವಣಗೆರೆ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು,
ದಾವಣಗೆರೆ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ
ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ಯಾನಲ್
ವಕೀಲರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.