ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಮ್ಮಿಕೊಂಡ ಡಿಜಿಟಲ್ ಅಭಿಯಾನವು, 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವುದನ್ನು ಪ್ರಶಂಸಿಸಿದರು.
ಸಮಾರಂಭದಲ್ಲಿ ಪರಿಸರ ಗೀತೆ, ಯುಟ್ಯೂಬ್ ಚಾನೆಲ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳಕೆದಾರರ ಸ್ನೇಹಿ ವೆಬ್ ಸೈಟಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಶ್ರೀ ಆನಂದ್ ಸಿಂಗ್, ಗೃಹ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವರಾದ ಶ್ರೀ ಸಿ ಟಿ ರವಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಸಂದೀಪ್ ದವೆ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಶ್ರೀ ವಿಜಯ್ ಕುಮಾರ್ ಗೋಗಿ, ಸದಸ್ಯ ಕಾರ್ಯದರ್ಶಿ ಶ್ರೀ ಶ್ರೀನಿವಾಸುಲು ಉಪಸ್ಥಿತರಿದ್ದರು.