ದಾವಣಗೆರೆ ಜೂ.05
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ,
ಅರಣ್ಯ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು
ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ
ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಸತ್ರ
ನ್ಯಾಯಾಧೀಶರಾದ ಕೆ.ಬಿ ಗೀತಾ ಇವರು ಸಸಿ ನೆಡುವುದರ
ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ದಾವಣಗೆರ ವಿಭಾಗದ ಉಪ ಅರಣ್ಯ
ಸಂರಕ್ಷಣಾಧಿಕಾರಿಗಳಾದ ಶ್ರೀನಿವಾಸ್, ಕೌಟುಂಬಿಕ ನ್ಯಾಯಾಲಯದ
ನ್ಯಾಯಾಧೀಶರಾದ ಜಿನರಾಲ್ಕರ್.ಬಿ.ಎಲ್, ಒಂದನೇ ಹೆಚ್ಚುವರಿ ಜಿಲ್ಲಾ
ಮತ್ತು ಸತ್ರ ನ್ಯಾಯಾಧೀಶರಾದ ಕೆಂಗಬಾಲಯ್ಯ, ಎರಡನೇ
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಾಗಶ್ರೀ,
ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ
ಚಂದ್ರಕಲಾ.ಈ, ಹಿರಿಯ ಸಿವಿಲ್ ನ್ಯಾಯಾಧೀಶರದ ಪ್ರಭು ಎನ್.
ಬಡಿಗೇರ್, ಸಹ ಅರಣ್ಯ ಸಂರಕ್ಷಣಾಧಿಕಾರಿ ತಿಪ್ಪೇಸ್ವಾಮಿ, ಸಾಮಾಜಿಕ ಉಪ
ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್, ವಲಯ ಅರಣ್ಯಾಧಿಕಾರಿ ಉಷಾ
ರಾಣಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ
ಸಾಬಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎನ್.ಟಿ ಮಂಜುನಾಥ್,
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ
ಅರುಣಕುಮಾರ್ ಎಲ್. ಹೆಚ್. ವಕೀಲರ ಸಂಘದ ಪದಾಧಿಕಾರಿಗಳು
ಹಾಗೂ ದಾವಣಗೆರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ಯಾನಲ್
ವಕೀಲರು ಉಪಸ್ಥಿತರಿದ್ದರು.