ದಾವಣಗೆರೆ ಜೂ.11
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ
ಹಾಗೂ ರಾಷ್ಟ್ರೀಯ ಬಾಲಕಾರ್ಮಿಕರ ಯೋಜನಾ ಸಂಸ್ಥೆ ಇವರ
ಸಂಯುಕ್ತಾಶಯದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಜೂ.12
ರಂದು ಬೆಳಿಗ್ಗೆ 10.30ಕ್ಕೆ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ
ದಿನಾಚರಣೆ ಅಂಗವಾಗಿ ಸಂಚಾರಿ ರಥದ ಜಾಗೃತಿ ಜಾಥಾ
ಕಾರ್ಯಕ್ರಮ ಆಯೋಜಿಸಿಲಾಗಿದೆ.
ಕಾರ್ಯಕ್ರಮದ ಚಾಲನೆಯನ್ನು ಜಿಲ್ಲಾಧಿಕಾರಿ ಮಹಾಂತೇಶ
ಬೀಳಗಿ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್
ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯತ್ ಮುಖ್ಯ
ಕಾರ್ಯನಿರ್ವಣಾಧಿಕಾರಿ ಪದ್ಮಾ ಬಸವಂತಪ್ಪ, ಸಾರ್ವಜನಿಕ ಶಿಕ್ಷಣ
ಇಲಾಖೆಯ ಉಪ ನಿರ್ದೇಶಕರಾದ ಪರಮೇಶ್ವರಪ್ಪ, ಮಹಿಳಾ
ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ
ವಿಜಯ ಕುಮಾರ್, ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ
ಆಯುಕ್ತರಾದ ಮಹಮ್ಮದ್ ಜಾಹೀರ್ ಬಾಷಾ, ಕಾರ್ಮಿಕ ಅಧಿಕಾರಿ
ಇಬ್ರಾಹೀಂ ಸಾಬ್ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದಾರೆ ಎಂದು
ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸಂಸ್ಥೆಯ ಜಿಲ್ಲಾ ಯೋಜನಾ
ನಿರ್ದೇಶಕರಾದ ಈ.ಎನ್.ಪ್ರಸನ್ನ ಕುಮಾರ್ ಪ್ರಕಟಣೆ ತಿಳಿಸಿದ್ದಾರೆ.