ದಾವಣಗೆರೆ ಜೂ.17
ಜೂ. 18 ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿವೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲಾ 31 ಪರೀಕ್ಷಾ ಕೇಂದ್ರಗಳ
ಸುತ್ತಮುತ್ತ ಪರೀಕ್ಷಾ ಅವಧಿಯಲ್ಲಿ 200 ಮೀ. ಪರಿಧಿ ವ್ಯಾಪ್ತಿ
ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ
ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ
ಸುತ್ತಮುತ್ತಲಿನ ಜೆರಾಕ್ಸ್, ಸೈಬರ್ ಕೆಫೆ ಮತ್ತು ಕಂಪ್ಯೂಟರ್
ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು
ಘೋಷಿಸಿ ಆದೇಶಿಸಲಾಗಿದೆ.
ಪರೀಕ್ಷೆ ಸುಗಮವಾಗಿ ನಡೆಯಲು ಮತ್ತು ಪರೀಕ್ಷಾ
ಕೇಂದ್ರಗಳಲ್ಲಿ ಅವ್ಯವಹಾರಗಳು ನಡೆಯದಂತೆ
ತಡೆಗಟ್ಟುವ ಸಲುವಾಗಿ ಹಾಗೂ ಪರೀಕ್ಷೆಗಳು ವ್ಯವಸ್ಥಿತವಾಗಿ
ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧ ಹೇರಲಾಗಿದೆ.
ಈ ಆದೇಶವು ಪರಿಕ್ಷಾರ್ಥಿಗಳಿಗೆ ಹಾಗೂ ಸದರಿ ಪರೀಕ್ಷೆಯ
ಕರ್ತವ್ಯ ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು
ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ. ಆದೇಶವನ್ನು ಕಟ್ಟುನಿಟ್ಟಾಗಿ
ಪಾಲಿಸುವಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್
ರಕ್ಷಣೆ ಒದಗಿಸಲು ಮತ್ತು ಸದರಿ ಕೇಂದ್ರಗಳ
ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್ ಕೆಫೆ
ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಿಸಲು ಜಿಲ್ಲಾ ಪೊಲೀಸ್
ಅಧಿಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ
ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.