ದಾವಣಗೆರೆ ಜೂ.16
2020-21 ಸಾಲಿನಲ್ಲಿ ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿ
ನೀಡಲು ಪರಿಶಿಷ್ಟ ವರ್ಗದ ಕಾನೂನು ಪದವಿ ಹೊಂದಿದ ಅರ್ಹ
ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಜಿಲ್ಲೆಗೆ ಎಂಟು ಭೌತಿಕ ಗುರಿಯನ್ನು ನಿಗದಿಪಡಿಸಲಾಗಿದ್ದು, ನಿಗದಿತ
ಅರ್ಜಿ ನಮೂನೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ
ಕಲ್ಯಾಣಾಧಿಕಾರಿಗಳ ಕಚೇರಿ, ದಾವಣಗೆರೆ ಹಾಗೂ ಆಯಾ ತಾಲ್ಲೂಕು
ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ದಾವಣಗೆರೆ/ಚನ್ನಗಿರಿ
ಮತ್ತು ಜಗಳೂರು ಹಾಘೂ ಸಹಾಯಕ ನಿರ್ದೇಶಕರು,
ಸಮಾಜ ಕಲ್ಯಾಣ ಇಲಾಖೆ ಹರಿಹರ ಮತ್ತು ಹೊನ್ನಾಳಿ ಇವರಿಂದ ಕಚೇರಿ
ವೇಳೆಯಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ
ಅರ್ಜಿಗಳನ್ನು ಜು.15ರ ಒಳಗಾಗಿ ಸಂಬಂಧಿಸಿದ ತಾಲ್ಲೂಕು ಪರಿಶಿಷ್ಟ
ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ
ಕಲ್ಯಾಣಾಧಿಕಾರಿಗಳ ಕಚೇರಿ ದಾವಣಗೆರೆ ಹಾಗೂ ಆಯಾ ತಾಲೂಕಿನ
ಪರಿಶಿಷ್ಟ ವಿದ್ಯಾರ್ಥಿಗಳು ಸಮಾಜಕಲ್ಯಾಣ ಇಲಾಖೆಯಲ್ಲಿ
ಸಂಪರ್ಕಿಸಬಹುದೆಂದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ
ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.