ದಾವಣಗೆರೆ ಜೂ.18
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ
ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ
ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಹಾಗೂ ಜೀವಮಾನ ಸಾಧನೆ
ಪ್ರಶಸ್ತಿಯನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು
ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2019ನೇ
ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು
ವೆಬ್‍ಸೈಟ್ ತಿತಿತಿ.ಞಚಿಡಿuಟಿಚಿಜu.ಞಚಿಡಿಟಿಚಿಣಚಿಞಚಿ.gov.iಟಿ/ಜಥಿes ಮೂಲಕ
ಆಹ್ವಾನಿಸಲಾಗಿದ್ದು ಅರ್ಹ ಕ್ರೀಡಾಪಟುಗಳು ಆನ್‍ಲೈನ್ ಮೂಲಕ
ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜುಲೈ 10 ಅರ್ಜಿ ಸಲ್ಲಿಸಲು ಕಡೆಯ
ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ 08192-237480 ಸಂಪರ್ಕಿಸಬಹುದಾಗಿದೆ.