ದಾವಣಗೆರೆ ಜೂ.20  
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ
ಇಲಾಖೆಯು ವಿವಿಧ ವೃಂಧಗಳ ಅಗ್ನಿಶಾಮಕ ಸಿಬ್ಬಂದಿಯ 1567
ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ
ಅರ್ಜಿಗಳನ್ನು ಆಹ್ವಾನಿಸಿದೆ. 32 ಅಗ್ನಿಶಾಮಕ ಠಾಣಾಧಿಕಾರಿಗಳ
ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು ಹಾಗೂ
ಚಾಲಕ ತಂತ್ರಜ್ಞರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 122
ಹುದ್ದೆಗಳಿಗೆ ಈ ನೇಮಕಾತಿ ಒಳಗೊಂಡಿದೆ.
ಅಂರ್ತಜಾಲ ತಾಣ ತಿತಿತಿ.ಞsಠಿ.gov.iಟಿ ಲಾಗ್‍ಇನ್ ಆಗಿ ಜೂನ್ 22 ರಿಂದ ಆನ್‍ಲೈನ್
ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು
ಜುಲೈ 20 ಕೊನೆಯ ದಿನಾಂಕವಾಗಿರುತ್ತದೆ. ಅಗ್ನಿಶಾಮಕ
ಮತ್ತು ತುರ್ತು ಸೇವಾ ಇಲಾಖೆಗೆ ಸೇರ್ಪಡೆಯಾಗಿ ಅಮೂಲ್ಯ
ಜೀವಗಳನ್ನು ರಕ್ಷಿಸಲು ಇದೊಂದು ಸದಾವಕಾಶವಾಗಿರುತ್ತದೆ
ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ
ಮಹಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *