ದಾವಣಗೆರೆ ಜೂ.27
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕೆಂಪೆಗೌಡರ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದೀಪಾ ಜಗದೀಶ್ ಪುಷ್ಪಾರ್ಪಣೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕರಾದ ರವಿಚಂದ್ರ, ನಗರವಾಣಿ ಉಪ ಸಂಪಾದಕರಾದ ಮಲ್ಲೇಶ್, ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ರಾಮೇಗೌಡ, ಜಿಲ್ಲಾ ಕನ್ನಡ ಸೇನೆ ಅಧ್ಯಕ್ಷರಾದ ಗೋಪಾಲಗೌಡ, ಸಮಾಜದ ಮುಖಂಡರು ಉಪಸ್ಥಿತರಿದ್ದರು.