ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷಾದಲ್ಲಿ, ಅರಣ್ಯ, ಪರಿಸರ, ಜೀವಿಶಾಸ್ತ್ರ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿ, ಮಾತನಾಡಿದರು.
ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಮ್ಮಿಕೊಂಡ ಡಿಜಿಟಲ್ ಅಭಿಯಾನವು, 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವುದನ್ನು ಪ್ರಶಂಸಿಸಿದರು. ಸಮಾರಂಭದಲ್ಲಿ ಪರಿಸರ ಗೀತೆ, ಯುಟ್ಯೂಬ್ ಚಾನೆಲ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳಕೆದಾರರ ಸ್ನೇಹಿ ವೆಬ್…