ದಾವಣಗೆರೆ ಜು.05
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ರಾಷ್ಟ್ರೀಯ ಆರ್ಯೋಗ್ಯ ಅಭಿಯಾನದ ಕೋವಿಡ್-19 ನಿಯಂತ್ರಣ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸಲು ಪ್ರಯೋಗಶಾಲಾ ತಂತ್ರಜ್ಞರನ್ನು ಮೆರಿಟ್ ಆಧಾರದ ಮೇಲೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ 5 ತಿಂಗಳ (ನವೆಂಬರ್-20ರ) ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಆಯ್ಕೆ ಮಾಡಿಕೊಳ್ಳಲಾಗುವುದು.
ದ್ವಿತೀಯ ಪಿಯುಸಿ ವಿಜ್ಞಾನ, ಅಥವಾ ಎಸ್.ಎಸ್.ಎಲ್.ಸಿ, ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಪ್ರಯೋಗಶಾಲಾ ತಂತ್ರಜ್ಞರು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ಅದೇ ವೈದ್ಯಕೀಯ ಮಂಡಳಿಯ ನೊಂದಣಿ ಹೊಂದಿರಬೇಕು. ಹಾಗೂ ಡಿ.ಎಂ.ಎಲ್.ಟಿ ಕೋರ್ಸ್ ಪಡೆದಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಸಂಬಂಧಿಸಿದ ಮೂಲ ದಾಖಲಾತಿಗಳೊಂದಿಗೆ ಒಂದು ಸೆಟ್ (ಜೇರಾಕ್ಸ್) ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಜು.8 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆ ಅವಧಿಯೊಳಗೆ ಜಿಲ್ಲಾ ಚಿಗಟೇರಿ ಆಸ್ವತ್ರೆ ಆವರಣ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಹಾಜರಿರಬೇಕು ನೇಮಕಾತಿಯ ಆಯ್ಕೆಯಲ್ಲಿ ಸಮಿತಿಯ ತಿರ್ಮಾನವೆ ಅಂತಿಮವಾಗಿರುತ್ತದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ರಾಘವನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-297171, 08192-223761.