ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿರಂತರವಾಗಿ ಏರಿಸುವ ಮೂಲಕ ಜನರ ಬದುಕಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುತ್ತಿದೆ. ದೇಶದ ಜನತೆ ಈಗಾಗಲೇ ಕರೋನಾ ಸಂಕಷ್ಟದಿಂದ ಕೆಲಸವಿಲ್ಲದೆ ಜೀವನ ನಡೆಸುವುದೇ ಕಷ್ಟ ಆಗಿರುವ ಸಂದರ್ಭದಲ್ಲಿ ಇಂಧನಗಳ ಬೆಲೆ ಏರಿಕೆ ಮಾಡುತ್ತಿರುವುದು ಖಂಡನೀಯ.

ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಮೇಲೆ ಏರಿಕೆ ಮಾಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೊಟ್ಟ ಮಾತನ್ನು ಮರೆತಿದೆ. ಇತ್ತ ಉದ್ಯೋಗ ಸೃಷ್ಟಿಯೂ ಇಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಣ ಕೂಡ ಮಾಡುತ್ತಿಲ್ಲ. ಕೇಂದ್ರ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲ ಆಗುತ್ತದೆ.

ಕೊರೊನಾ ವೈರಸ್ ವ್ಯಾಪಕ ಆಗುತ್ತಿರುವ ಹಿನ್ನೆಲೆಯಲ್ಲಿ ವ್ಯಾಪಾರ ವಹಿವಾಟು ಕಡಿಮೆ ಆಗಿದೆ. ಬಡ, ಮಧ್ಯಮ ವರ್ಗದ ಜನರು ಕೆಲಸವಿಲ್ಲದೆ ದಿನ ಕಳೆಯುತ್ತಿದ್ದಾರೆ. ಉದ್ಯೋಗ ವಂತ ಯುವಜನತೆಯ ಕೆಲಸ ಕಳೆದು ಕೊಳ್ಳುತ್ತಿದ್ದಾರೆ. ಇಂತಹ ಕಷ್ಟದ ದಿನಗಳಲ್ಲಿ ಸಹ ಕೇಂದ್ರ ಸರ್ಕಾರ ಮನಸ್ಸಿಗೆ ಬಂದಂತೆ ಪೆಟ್ರೋಲ್, ಡೀಸೆಲ್ ದರ ಏರುತ್ತಿರುವುದು ಸರಿಯಲ್ಲ.

ಪೆಟ್ರೋಲ್, ಡೀಸೆಲ್ ದರವನ್ನು ಕೂಡಲೇ ಕಡಿಮೆಗೊಳಿಸಬೇಕು. ಯುವಜನರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಡ ಹಾಗೂ ಮಧ್ಯಮ ವರ್ಗ ಸೇರಿ ದೇಶದ ಎಲ್ಲ ಜನರಿಗೆ ಆರ್ಥಿಕ ಭದ್ರತೆಯ ವಾತಾವರಣ ಸೃಷ್ಟಿಸಬೇಕು ಎಂದರು.

ಎನ್ ಎಸ್ ಯುಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಜಿಲ್ಲಾಧ್ಯಕ್ಷ ಎಚ್.ಎಸ್.ಬಾಲಾಜಿ, ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ, ಅಬ್ದುಲ್ ಸತ್ತಾರ್, ಗಿರೀಶ್, ಶಿವು, ಭರತ್, ಸಂದೀಪ್, ಪ್ರಮೋದ್, ಆಕಾಶ ಮುಂತಾದವರು ಸಹ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *