ದಾವಣಗೆರೆ ಜಿಲ್ಲೆ ಜುಲೈ 7 ಹೊನ್ನಾಳಿ ಪ್ರವಾಸಿ ಮಂದಿರದಲ್ಲಿ ಇಂದು ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಆದೇಶದ ಹಿನ್ನೆಲೆಯಲ್ಲಿ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ಮತ್ತು ಜಿಲ್ಲಾಧ್ಯಕ್ಷರಾದ ಹೆಚ್.ಬಿ ಮಂಜಪ್ಪನವರ ಮುಂದಾಳತ್ವದಲ್ಲಿ ನಾಳೆ ನಡೆಯುವ ದಿನಾಂಕ 8- 7- 20 20 ರಂದು ಕೊರೋನಾ ಕೋವಿಡ್ 19 ಇರುವಾಗ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಗಣನೀಯವಾಗಿ ಏರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿರುದ್ಧ ನಾಳೆ ಬೆಳಗ್ಗೆ 11 ಗಂಟೆಗೆ ಸರಿಯಾಗಿ ಸೈಕಲ್ ಜಾಥಾದ ಮೂಲಕ ದೇವನಾಯಕನಹಳ್ಳಿ ವೃತ್ತದಿಂದ ತಾಲೂಕು ಆಫೀಸಿನ ವರೆಗೆ ತೆರಳಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸುವಂತೆ ತಾಲೂಕು ದಂಡಾಧಿಕಾರಿಗಳಿಗೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾಂಗ್ರೆಸ್ ಕಾರ್ಯಕರ್ತರುಗಳು ಗಳೊಂದಿಗೆ ಜೊತೆಗೂಡಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ
