ದಾವಣಗೆರೆ ಜು.08
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಜಿಲ್ಲೆಯ
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡುವ
ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದು, ಅರ್ಹ
ಕಾನೂನು ಪದವೀಧರರಿಂದ ಶಿಷ್ಯವೇತನಕ್ಕಾಗಿ ಆನ್‍ಲೈನ್
ಮೂಲಕ ಅರ್ಜಿ ಸಲ್ಲಿಸಬಹುದು.
ಈಗಾಗಲೇ ಕಾನೂನು ಪದವೀಧರ ಶಿಷ್ಯವೇತನ
ಪಡೆಯುತ್ತಿರುವ ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ನವೀಕರಣ
ಮಾಡಿಸಿಕೊಳ್ಳಲು ಸೂಚಿಸಿದೆ. ಅರ್ಜಿ ಸಲ್ಲಿಸ ಬಯಸುವವರು ಜುಲೈ 01
ರಿಂದ ನವಂಬರ್ 30 ರವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ
ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ
ಕಲ್ಯಾಣ ಇಲಾಖೆ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ
ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನ್ನು ಸಂಪರ್ಕಿಸಬಹುದೆಂದು ಸಮಾಜ
ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶಿವಾನಂದ ಎಂ ಕುಂಬಾರ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.