ದಾವಣಗೆರೆ ಜು.10
ಕನ್ನಡ ಸಾಹಿತ್ಯ ಪರಿಷತ್ತು 2020-21 ನೇ ಸಾಲಿನ ಕನ್ನಡ
ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು
ಆಹ್ವಾನಿಸಿದೆ.
2020 ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಸುವ
ಪರೀಕ್ಷೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 21 ಕೊನೆಯ
ದಿನವಾಗಿದೆ. ನಂತರ ಅರ್ಜಿಯನ್ನು ಸಲ್ಲಿಸುವವರು ಸೆಪ್ಟೆಂಬರ್ 15
ರವರೆಗೆ ದಂಡ ಶುಲ್ಕ ರೂ.50 ರೂ ಅನ್ನು ಹೆಚ್ಚುವರಿಯಾಗಿ
ನೀಡಿ ಅರ್ಜಿಯನ್ನು ಸಲ್ಲಿಸಬಹುದು.
ರೂ .25 ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ
ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ
ಮಳಿಗೆಯಲ್ಲಿ(ಬೆಂಗಳೂರು) ಆಗಸ್ಟ್ 10 ರಿಂದ
ಪಡೆಯಬಹುದು ಅಥವಾ ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ
ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ
ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು.
ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ ತಿತಿತಿ.ಞಚಿsಚಿಠಿಚಿ.iಟಿ ಮೂಲಕ
ಸಹ ಪಡೆದುಕೊಳ್ಳಬಹುದು. ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ
ಶುಲ್ಕ ರೂ.25 ಗಳನ್ನೂ ಪ್ರತ್ಯೇಕವಾಗಿ
ಪಾವತಿಸಬಹುದುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ
ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು-
18 ದೂರವಾಣಿ ಸಂಖ್ಯೆ 080-26623584 ಯನ್ನು
ಸಂಪರ್ಕಿಸಬುಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ
ಕಾರ್ಯದರ್ಶಿ ಡಾ. ರಾಜಶೇಖರ ಹತಗುಂದಿ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.