ದಾವಣಗೆರೆ ಜು.14 
2020-21 ನೇ ಸಾಲಿನಲ್ಲಿ ನಿಜಶರಣ ಅಂಬಿಗರ ಚೌಡಯ್ಯ
ಅಭಿವೃದ್ಧಿ ನಿಗಮದಿಂದ ಅಂಬಿಗ ಸಮಾಜಕ್ಕೆ ಸೇರಿದ ಹಾಗೂ ಇದರ
ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಬ್ಯಾಂಕ್‍ಗಳ
ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ,
ಕಿರುಸಾಲ/ಸ್ವ ಸಹಾಯ ಗುಂಪುಗಳಿಗೆ ಸಹಾಯಧನ,
ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ
ಯೋಜನೆ ಹಾಗೂ ಕೌಶಲ್ಯಭಿವೃದ್ಧಿ/ಉದ್ಯಮಶೀಲತಾ
ಯೋಜನೆಯಡಿ ತರಬೇತಿ ಸೌಲಭ್ಯ ಪಡೆಯಲು ಅರ್ಜಿಗಳನ್ನು
ಆಹ್ವಾನಿಸಲಾಗಿದೆ.
ಪ್ರವರ್ಗ-1ರ ಕೋಲಿ, ಗಂಗಾಮತ, ಬೆಸ್ತ, ಕಬ್ಬಲಿಗ,
ಮೊಗವೀರ, ಅಂಬಿಗ/ಅಂಬಿ, ಬಾರ್ಕಿ/ಬಾರಿಕ, ಬೆಸ್ತರ್, ಭೋಯಿ,
ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್,
ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ,
ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆ-
ಬೆಸ್ತ/ಗುಂಡೆಬೆಸ್ತ, ಹರಕಂತ್ರ, ಜಲಗಾರ,
ಕಬ್ಬೇರ/ಕಬ್ಬೇರ್, ಕಬ್ಬಿಲಿ, ಕಹರ್, ಖಾರ್ವಿ/ಕೊಂಕಣಖಾರ್ವಿ,

ಕೋಳಿಮಹದೇವ್, ಮಡ್ಡರ್, ಮೀನಗಾರ್, ಮಗೇರ್,
ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ, ತೊರೆಯ, ವಾಗಿ
ಜನಾಂಗದವರು ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1 ಅಂದರೆ
ಮೇಲೆ ತಿಳಿಸಿರುವಂತೆ ಅಂಬಿಗ ಸಮುದಾಯಕ್ಕೆ ಹಾಗೂ ಇದರ
ಉಪಜಾತಿಗಳಿಗೆ ಸೇರಿದವರಾಗಿರಬೇಕು. ರಾಜ್ಯ ಸರ್ಕಾರದ
ಯೋಜನೆಗಳಿಗೆ ಅವರ ಕುಟುಂಬದ ವಾರ್ಷಿಕ ವರಮಾನ
ಗ್ರಾಮಾಂತರ ಪ್ರದೇಶದವರಿಗೆ ರೂ. 40,000/-ಗಳು
ಪಟ್ಟಣ ಪ್ರದೇಶದವರಿಗೆ ರೂ.55,000/-ಗಳ ಒಳಗಿರಬೇಕು.
ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ
ಮಿತಿಯಲ್ಲಿರಬೇಕು. ಅರ್ಜಿದಾರರು ಕೆ.ವೈ.ಸಿ. ಬಗ್ಗೆ ಆಧಾರ್
ಕಾರ್ಡ್/ಚುನವಣಾ ಗುರುತಿನ ಚೀಟಿ/ಪಾನ್ ಕಾರ್ಡ್
ದಾಖಲೆಗಳನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು.
ಅರ್ಜಿದಾರರು ಐ.ಎಫ್.ಎಸ್.ಸಿ. ಕೋಡ್ ಹೊಂದಿರುವ
ರಾಷ್ಟ್ರೀಕೃತ/ಗ್ರಾಮೀಣ ಬ್ಯಾಂಕ್‍ಗಳಲ್ಲಿ ಉಳಿತಾಯ ಖಾತೆ
ಹೊಂದಿರಬೇಕು. ಸರ್ಕಾರದ / ಯಾವುದಾದರೂ ನಿಗಮಗಳ
ಯಾವುದಾದರು ಯೋಜನೆಯಡಿಯಲ್ಲಿ ಕುಟುಂಬದ ಯಾರೇ
ಆಗಲಿ ಈಗಾಗಲೇ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು
ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ
ಪಡೆಯಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು
ತಿರಸ್ಕರಿಸಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗಿಂತ
ಹೆಚ್ಚಿನವರಿಗೆ ಸೌಲಭ್ಯ ಒದಗಿಸಲಾಗುವುದಿಲ್ಲ.
ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವ ಈ
ಮೇಲ್ಕಂಡ ಜನಾಂಗದವರು ಉಚಿತವಾಗಿ ಅರ್ಜಿ ನಮೂನೆಯನ್ನು
ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಅರ್ಜಿ ಪಡೆದು
ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್
ಮತ್ತು ಫೋಟೋವನ್ನು ಮತ್ತು ಅರಿವು ಶೈಕ್ಷಣಿಕ
ಸಾಲಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ
ದಾಖಲಾತಿಗಳು, ಗಂಗಾ ಕಲ್ಯಾಣ ನೀರಾವರಿಗೆ ಸಂಬಂಧಿಸಿದಂತೆ
ಕೊಳವೆಬಾವಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರು
ಜಮೀನಿನ ದಾಖಲಾತಿಗಳು ಮತ್ತು ಸಣ್ಣ ರೈತರ ಪ್ರಮಾಣ
ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಭರ್ತಿ ಮಾಡಿದ
ಅರ್ಜಿಯನ್ನು ದಾಖಲಾತಿಗಳೊಡನೆ ನಿಜಶರಣ ಅಂಬಿಗರ
ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ/ಡಿ.ದೇವರಾಜ ಅರಸು
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿಗೆ ಆಗಸ್ಟ್
12 ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಛೇರಿಯನ್ನು (ಕಛೇರಿ
ದೂರವಾಣಿ ಸಂಖ್ಯೆ: 08192-230934) ಅಥವಾ ನಿಗಮದ ವೆಬ್‍ಸೈಟ್
hಣಣಠಿs://ಚಿmbigಚಿಡಿಚಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು
ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *