ದಾವಣಗೆರೆ ಜು.14
2020-21ನೇ ಸಾಲಿನಲ್ಲಿ ಕರ್ನಾಟಕ ಮಡಿವಾಳ ಮಾಚಿದೇವ
ಅಭಿವೃದ್ಧಿ ನಿಗಮದಿಂದ ಮಡಿವಾಳ ಸಮಾಜಕ್ಕೆ ಸೇರಿದ ಹಾಗೂ
ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ
ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ
ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ, ಅರಿವು ಶೈಕ್ಷಣಿಕ ಸಾಲ
ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಲ್ಲಿ
ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿಗಳನ್ನು
ಆಹ್ವಾನಿಸಲಾಗಿದೆ.
ಮಡಿವಾಳ ಮಾಚಿದೇವ ಸಮಾಜಕ್ಕೆ ಸೇರಿದ ಅಗಸ, ಚಕಲ,
ಧೋಬಿ, ಮಡಿವಾಳ, ಮನ್ನನ್, ಪರಿತ್, ರಾಜಕ, ಸಕಲ, ವನ್ನನ್,
ವೆಲ್ಲು ತೇಡನ್, ಸಾಕಲವಾಡು ಇವರು ಅರ್ಜಿ ಸಲ್ಲಿಸಬಹುದು.
ಈ ಯೋಜನೆಗಳ ಸೌಲಭ್ಯ ಪಡೆಯಲು ಹೊಂದಿರಬೇಕಾದ
ಸಾಮಾನ್ಯ ಅರ್ಹತೆಗಳು: ಅರ್ಜಿದಾರರು ಹಿಂದುಳಿದ ವರ್ಗಗಳ
ಪ್ರವರ್ಗ-2ಎ ಮಡಿವಾಳ ಜನಾಂಗ ಹಾಗೂ ಇದರ ಉಪಜಾತಿಗಳಿಗೆ
ಸೇರಿದವರಾಗಿರಬೇಕು. ರಾಜ್ಯ ಸರ್ಕಾರದ ಯೋಜನೆಗಳಿಗೆ
ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ
ಪ್ರದೇಶದವರಿಗೆ ರೂ.40,000 ಪಟ್ಟಣ ಪ್ರದೇಶದವರಿಗೆ
ರೂ.55,000 ಒಳಗಿರಬೇಕು. 18 ರಿಂದ 55 ವರ್ಷಗಳ
ವಯೋಮಾನದವರಾಗಿರಬೇಕು. ಕೆ.ವೈ.ಸಿ. ಬಗ್ಗೆ ಆಧಾರ್
ಕಾರ್ಡ್/ಚುನಾವಣಾ ಗುರುತಿನ ಚೀಟಿ/ಪಾನ್ ಕಾರ್ಡ್
ದಾಖಲೆಗಳನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು.
ಐ.ಎಫ್.ಎಸ್.ಸಿ. ಕೋಡ್ ಹೊಂದಿರುವ ರಾಷ್ಟ್ರೀಕೃತ/ಗ್ರಾಮೀಣ
ಬ್ಯಾಂಕ್‍ಗಳಲ್ಲಿ ಉಳಿತಾಯ ಖಾತೆ ಹೊಂದಿರಬೇಕು.
ಅರ್ಜಿದಾರರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ
ಕಚೆÉೀರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು
ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್
ಮತ್ತು ಫೋಟೋವನ್ನು ಮತ್ತು ಅರಿವು ಶೈಕ್ಷಣಿಕ
ಸಾಲಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ
ದಾಖಲಾತಿಗಳು, ಗಂಗಾ ಕಲ್ಯಾಣ ನೀರಾವರಿಗೆ ಸಂಬಂಧಿಸಿದಂತೆ
ಕೊಳವೆಬಾವಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರು
ಜಮೀನಿನ ದಾಖಲಾತಿಗಳು ಮತ್ತು ಸಣ್ಣ ರೈತರ ಪ್ರಮಾಣ
ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಭರ್ತಿ ಮಾಡಿದ
ಅರ್ಜಿಯನ್ನು ದಾಖಲಾತಿಗಳೊಡನೆ ಡಿ.ದೇವರಾಜ ಅರಸು
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗೆ
ಆ.03 ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಚೆÉೀರಿಯ ದೂ.ಸಂ:
08192-230934 ಅಥವಾ ನಿಗಮದ
ವೆಬ್‍ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ಸಂಪರ್ಕಿಸಬಹುದು.