ದಾವಣಗೆರೆ ಜು.17
ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ
ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್ ಇವರ
ಅಧ್ಯಕ್ಷತೆಯಲ್ಲಿ ಇಂದು ದೂಡಾ ಕಚೇರಿಯಲ್ಲಿ ದಾವಣಗೆರೆ-
ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯ
ಪ್ರದೇಶಗಳಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ತಡೆಯುವ
ಕುರಿತು ಸಭೆ ನಡೆಯಿತು.
ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ
ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ಬರುವ
ದೊಡ್ಡಬೂದಿಹಾಳು, ದೊಡ್ಡಬಾತಿ, ಚಿಕ್ಕಬೂದಿಹಾಳು ಹಾಗೂ
ಇತರೇ ಪ್ರದೇಶಗಳಲ್ಲಿ ಅನಧಿಕೃತ ಬಡಾವಣೆಗಳು
ನಿರ್ಮಾಣವಾಗುತ್ತಿದ್ದು, ಇಂತಹ ಅನಧಿಕೃತ ಬಡಾವಣೆಗಳ
ನಿರ್ಮಾಣವನ್ನು ತಡೆಯುವ ಕುರಿತು ಚರ್ಚೆ ನಡೆಸಲಾಯಿತು.
ಹಾಗೂ ಇಂತಹ ಅನಧಿಕೃತ ಬಡಾವಣೆಗಳನ್ನು
ತೆರವುಗೊಳಿಸಲು ಏಳು ದಿನಗಳ ಕಾಲಾವಕಾಶವನ್ನು
ನೀಡುವಂತೆ ಸಭೆಯಲ್ಲಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ.
ಇನ್ನು ಮುಂದೆ ಹೀಗೆ ಅನಧಿಕೃತ ಬಡಾವಣೆಗಳಲ್ಲಿನ
ನಿವೇಶನಗಳನ್ನು ನೋಂದಣಿ ಮಾಡಿಕೊಳ್ಳಬಾರದೆಂದು
ಹಾಗೂ ಖಾತೆಗಳನ್ನು ನೋಂದಣಿ ಮಾಡಿಕೊಳ್ಳದಂತೆ
ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ದೂಡಾ ಆಯುಕ್ತರಾದ ಬಿ.ಟಿ.ಕುಮಾರಸ್ವಾಮಿ,
ಹರಿಹರ ನಗರಸಭೆ ಪೌರಾಯುಕ್ತೆ ಲಕ್ಷ್ಮೀದೇವಿ, ಪಾಲಿಕೆ ಉಪ
ಆಯುಕ್ತ ಪ್ರಭು, ರೆವಿನ್ಯೂ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *