ದಾವಣಗೆರೆ ಜು.22
ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರಾದ
ಪ್ರೊ. ಎನ್.ಲಿಂಗಣ್ಣ ಇವರ ಅಧ್ಯಕ್ಷತೆಯಲ್ಲಿ ಜು.21 ರಂದು
ದಾವಣಗೆರೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ, ಗ್ರಾಮ
ಪಂಚಾಯಿತಿಗಳ ಆಡಳಿತಾಧಿಕಾರಿಗಳು ಹಾಗೂ ಪಂಚಾಯಿತಿ
ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಗತಿ ಪರಿಶೀಲನಾ ಸಭೆ
ಏರ್ಪಡಿಸಲಾಗಿತ್ತು.
ಸಭೆಯಲ್ಲಿ ಕೋವಿಡ್-19 ಕುರಿತು ಕೈಗೊಂಡ
ಕ್ರಮಗಳ ಬಗ್ಗೆ ಹಾಗೂ ಮಹಾತ್ಮ ಗಾಂಧಿ ರಾಷ್ಟೀಯ
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತಾಲ್ಲೂಕಿನಲ್ಲಿ
ಕೈಗೊಂಡ ಕಾಮಗಾರಿಗಳ ವಿವರಗಳನ್ನು
ಪಡೆದುಕೊಂಡರು. ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ
ಕಾಮಗಾರಿಗಳನ್ನು ಕೈಗೊಂಡ ಕೂಲಿಗಾರರಿಗೆ ಅನುಕೂಲ
ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಈ
ಸಭೆಯಲ್ಲಿ ಮಾನ್ಯ ದಾರುಕೇಶ್.ಬಿ.ಎಂ, ಕಾರ್ಯನಿರ್ವಾಹಕ
ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ದಾವಣಗೆರೆ ಇವರು
ಉಪಸ್ಥಿತರಿದ್ದರು.