ದಾವಣಗೆರೆ ಜು.28
ದಾವಣಗೆರೆ ನಗರದ 13 ಪರೀಕ್ಷಾ ಕೇಂದ್ರಗಳಲ್ಲಿ
ಹಾಗೂ ಚನ್ನಗಿರಿ, ಹರಿಹರ, ಹೊನ್ನಾಳಿಯ ತಲಾ 1 ಪರೀಕ್ಷಾ
ಕೇಂದ್ರಗಳು ಸೇರಿದಂತೆ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ
ಜುಲೈ 30 ಹಾಗೂ 31 ರಂದು ಸಾಮಾನ್ಯ ಪ್ರವೇಶ
ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ
ಸುತ್ತಮುತ್ತ 200 ಮೀಟರ್ ಪರಧಿ ವ್ಯಾಪ್ತಿ ಪ್ರದೇಶವನ್ನು
ಪರೀಕ್ಷಾ ದಿನಾಂಕಗಳಂದು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ
ಪ್ರದೇಶವೆಂದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ
ಮುತ್ತಲಿನ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್
ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿರುತ್ತಾರೆ.