ದಾವಣಗೆರೆ ಆ.04
ಆ.5 ರಂದು ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ
ನಡೆಯುವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ
ಸಲುವಾಗಿ ಜಿಲ್ಲೆಯಾದ್ಯಂತ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12
ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸರಬರಾಜು
ನಿಷೇಧಗೊಳಿಸಲಾಗಿದೆ.
ಅಂದು ದೇವಸ್ಥಾನ ಕಮಿಟಿ ಮತ್ತು ಇತರೆ ಸಂಘಟನೆಗಳು ಸಿಹಿ ಹಂಚಿ
ಸಂಭ್ರಮಾಚರಣೆ ಮಾಡುವ ಸಂಭವವಿದೆ. ಈ ಸಂದರ್ಭದಲ್ಲಿ ಕೆಲವು
ಸಂಘಟನೆಗಳು ಹಾಗೂ ಹೋರಾಟಗಾರರು ಅಡಚಣೆ ಉಂಟು ಮಾಡಿ
ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ಸಂಭವವಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ
ಕಾಪಾಡುವ ಸಲುವಾಗಿ ಮುಂಜಾಗ್ರತಾ ದೃಷ್ಟಿಯಿಂದ ಜಿಲ್ಲೆಯಾದ್ಯಂತ
ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ
ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.