ದಾವಣಗೆರೆ ಆ.05
ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಖಾಲಿ ಇದ್ದ ವಿವಿಧ
ವೃಂದದ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಜೂನ್ 7 ರಂದು ನಡೆದ
ನೇರ ಸಂದರ್ಶನದಲ್ಲಿ ರೋಸ್ಟರ್ ಹಾಗೂ ಮೆರಿಟ್ ಆಧಾರದ ಮೇಲೆ
ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ
ಸೂಚನಾ ಫಲಕದಲ್ಲಿ ಆಗಸ್ಟ್ 03 ರಂದು ಪ್ರಕಟಿಸಲಾಗಿದ್ದು, ಈ
ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 10 ರೊಳಗೆ ಸಲ್ಲಿಸಬೇಕೆಂದು
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.