ದಾವಣಗೆರೆ ಆ.07
ಪ್ರಸಕ್ತ ಸಾಲಿನಲ್ಲಿ ಪ.ಜಾತಿಯ ಅಲೆಮಾರಿ ಸಮುದಾಯಗಳ ಅಭಿವೃದ್ದಿ ಕೋಶದಿಂದ ನೀಡಲಾಗುವ ಆರ್ಥಿಕ ಅಭಿವೃದ್ದಿಗಾಗಿ ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಗಳಡಿ ಅರ್ಜಿ ಸಲ್ಲಿಸಲು ವಯೋಮಿತಿ 21 ರಿಂದ 50 ವರ್ಷದೊಳಗಿರಬೇಕು.
ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ-ಮಹಿಳಾ ಸ್ವಹಾಯ ಗುಂಪುಗಳಿಗೆ), ಯೊಜನೆಗಳಡಿ ಸಾಲ ಸೌಲಭ್ಯ ನೀಡಲಾಗುವುದು. ಅರ್ಜಿ ಸಲ್ಲಿಸಲು ಬಯಸುವವರು ನಿಗಮದ ವೆಬ್‍ಸೈಟ್ hಣಣಠಿ://ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ, ನಿಂದ ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬಹುದು ಅಥವಾ ಆನ್‍ಲೈನ್‍ನಲ್ಲಿ ಭರ್ತಿ ಮಾಡಿ ಅವಶ್ಯ ದಾಖಲೆಗಳೊಂದಿಗೆ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಬಹುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಪ.ಜಾತಿ ಅಲೆಮಾರಿ ಸಮುದಾಯದ ಜನರು ಅಲೆಮಾರಿ ಅಭಿವೃದ್ಧಿ ಕೋಶದಿಂದ ಈ ಹಿಂದೆ ಸೌಲಭ್ಯ ಪಡೆದಿದ್ದಲ್ಲಿ, ಮತ್ತೆ ಸೌಲಭ್ಯ ಪಡೆಯಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗೆ ನಿಗಮದÀ ಜಿಲ್ಲಾ ಕಚೇರಿ ದೂ.ಸಂ: 08192-258648 ಕ್ಕೆ ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *