ದಾವಣಗೆರೆ ಆ.07
    ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ -2020ರ ಸಂಬಂಧ
ರಾಜ್ಯ ಚುನಾವಣೆ ಆಯೋಗದ ನಿರ್ದೇಶನದಂತೆ ಕರಡು
ಮತದಾರರ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಚುನಾವಣೆ
ನಡೆಸುವ ನಿಯಮಗಳು, 1993ರ ನಿಯಮ 5(3) ರಂತೆ
ಪ್ರತಿಯೊಂದು ಚುನಾವಣೆ ಕ್ಷೇತ್ರಕ್ಕೆ ಸಂಬಂಧಿಸಿದ ಮತದಾರರ
ಪಟ್ಟಿಯ ಪ್ರತಿಯನ್ನು ಪ್ರತಿ ಕ್ಷೇತ್ರದ ಮತಗಟ್ಟೆಗಳಲ್ಲಿ,
ಗ್ರಾಮ ಪಂಚಾಯತಿ ಕಚೇರಿ, ತಾಲ್ಲೂಕು ಕಚೇರಿ ಹಾಗೂ ಇತರೇ
ಕಚೇರಿಗಳಲ್ಲಿ ಸಹ ಗ್ರಾಮ ಪಂಚಾಯತಿಯ ಕರಡು
ಮತದಾರರ ಪಟ್ಟಿಯನ್ನು ಪ್ರಚುರ ಪಡಿಸಲಾಗಿರುತ್ತದೆ.
ಸಾರ್ವಜನಿಕರು ಮತದರಾರ ಪಟ್ಟಿಗೆ ಸಂಬಂಧಿಸಿದಂತೆ ತಿದ್ದುಪಡಿ,
ದೋಷ ಅಥವಾ ಆಕ್ಷೇಪಣೆಗಳು ಇದ್ದಲ್ಲಿ ಆಗಸ್ಟ್ 14 ರೊಳಗೆ
ಆಯಾ ವ್ಯಾಪ್ತಿಯ ತಹಶೀಲ್ದಾರ್ ಕಚೇರಿಗಳಲ್ಲಿ ಸಲ್ಲಿಸಬಹುದು ಎಂದು
ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *