ದಾವಣಗೆರೆ ಆ.13
    2020-21ನೇ ಸಾಲಿನಲ್ಲಿ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆ
ಅಡಿಯಲ್ಲಿ 2019 ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ ಮತ್ತು
ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ
ವಿಜೇತರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ
ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗೆ
ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
    ಅರ್ಹ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಸಹಾಯಕ
ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ  ಮತ್ತು ಕ್ರೀಡಾ
ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ಇಲ್ಲಿ ಕಚೇರಿ ವೇಳೆಯಲ್ಲಿ
ಪಡೆಯಬಹುದಾಗಿದೆ.
    ಅರ್ಜಿ ನಮೂನೆಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ಈ
ಕಚೇರಿಯಲ್ಲಿ ದೃಢೀಕರಿಸಿ  ಸೆ.10 ರೊಳಗೆ ಆನ್‍ಲೈನ್
ಮೂಲಕ ತಿತಿತಿ.ಞಚಿಡಿuಟಿಚಿಜu.ಞಚಿಡಿಟಿಚಿಣಚಿಞಚಿ.gov.iಟಿ/ಜves ಈ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್
ಮಾಡಲು ಸೂಚಿಸಿದ್ದು, ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08192-
2374780 ಸಂರ್ಪಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ
ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *