ಹೆಚ್ಚೆಚ್ಚು ಕೊರೊನಾ ಪರೀಕ್ಷೆ ನಡೆಸಿ
ದಾವಣಗೆರೆ ಆ.15
ಜಿಲ್ಲೆಯಲ್ಲಿ ಕೊರೊನಾ ಸಂಖ್ಯೆ ಹೆಚ್ಚುತ್ತಿರುವ
ಪ್ರದೇಶಗಳಲ್ಲಿ ಅತೀ ಹೆಚ್ಚು ಪರೀಕ್ಷೆ ನಡೆಸುವಂತೆ
ನಗರಾಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ
ಬಿ.ಎ.ಬಸವರಾಜ ಅಧಿಕಾರಿಗಳಿಗೆ ಸೂಚಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ
ಕೊರೊನಾ ರೋಗಿಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು
ಕಳವಳ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ
ನಿಯಂತ್ರಿಸಲು ಅತೀ ಹೆಚ್ಚು ಕ್ರಮ ಕೈಗೊಳ್ಳುವ ಭರವಸೆ
ನೀಡಿದರು.
ಇಂದು ಸಂಗೊಳ್ಳಿ ರಾಯಣ್ಣ ಅವರ ಹುಟ್ಟಹಬ್ಬದ ದಿನವಾಗಿದೆ. ಈ
ಹಿನ್ನೆಲೆಯಲ್ಲಿ ಬಿಎಸ್‍ಎನ್‍ಎಲ್ ಬಳಿಯ ರೈಲ್ವೇ ಕ್ರಾಸ್‍ನ ಓವರ್
ಬ್ರಿಡ್ಜ್‍ನ್ನು ಸಂಗೊಳ್ಳಿ ರಾಯಣ್ಣ ಮೇಲ್ಸೆತುವೆ ಎಂದು
ನಾಮಕರಣ ಮಾಡಲು ಮಹಾನಗರಪಾಲಿಕೆ ಹಾಗೂ ದೂಡಾ
ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಸದ್ಯದಲ್ಲಿಯೇ
ನೆರವೇರಿಸಲಾಗುವುದು ಎಂದು ತಿಳಿಸಿದರು.
ಕೊರೊನಾ ಸಂದರ್ಭ ಇದಾಗಿದ್ದು, 3 ವರ್ಷ ಪೂರೈಸಿದ
ವೈದ್ಯಕೀಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಸೇವೆಗೆ
ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಇದರಿಂದ ಜಿಲ್ಲೆಗೆ 150-200
ವೈದ್ಯರು ಲಭಿಸಿದಂತಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ
ಕ್ಷೇತ್ರದ ಶಾಸಕರಾದ ಎಸ್.ಎ.ರವೀಂದ್ರನಾಥ್, ಜಿಲ್ಲಾ ಪಂಚಾಯತ್
ಅಧ್ಯಕ್ಷೆ ದೀಪಾ ಜಗದೀಶ್, ಮಹಾನಗರಪಾಲಿಕೆ ಮಹಾಪೌರರಾದ
ಬಿ.ಜಿ.ಅಜಯ ಕುಮಾರ್, ದೂಡಾ ಅಧ್ಯಕ್ಷ ರಾಜನಳ್ಳಿ ಶಿವಕುಮಾರ್,
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ
ಸೇರಿದಂತೆ ಮತ್ತಿತರರು ಹಾಜರಿದ್ದರು.