ದಾವಣಗೆರೆ ಆ.17
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ
ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್
ರಾಷ್ಟ್ರೀಕೃತ ಬ್ಯಾಂಕ್ನವರು ಮುಂದಿನ ದಿನಗಳಲ್ಲಿ ಒಂಬತ್ತು ಸಾವಿರ
ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ
ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50
ದಿನಗಳ ತರಬೇತಿಯನ್ನು ಆನ್ಲೈನ್ನಲ್ಲಿ ನೀಡಲು ಆಯೋಜಿಸಿದೆ.
ಆಸಕ್ತರು ಆಗಸ್ಟ್ 25 ರ ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ
ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು
ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು
ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರಾದ ಪ್ರೊ.
ಲಿಂಗರಾಜಗಾಂಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.