ದಾವಣಗೆರೆ ಆ.17
ಮಾಜಿ ಮುಖ್ಯ ಮಂತ್ರಿಗಳಾದ ಡಿ.ದೇವರಾಜ ಅರಸುರವರ 105 ನೇ
ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಗಸ್ಟ್ 20 ರಂದು
ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ
ಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ಮತ್ತು ಸಾಂಕೇತಿಕವಾಗಿ
ಆಚರಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ
ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.